ದಿನಾಂಕ: 29-05-25 ರ ನಾಳೆ ಮಧ್ಯಾಹ್ನ 2.30 ರ ಸಮಯಕ್ಕೆ ಬೋಳಾರದಲ್ಲಿರುವ ಶಾದಿಮಹಲ್ ಹಾಲ್ ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರ ತುರ್ತು ಸಭೆಯನ್ನು ಕರೆಯಲಾಗಿದ್ದು, ಈ ಸಭೆಗೆ ವಿಶೇಷವಾಗಿ ದಕ್ಷಿಣ ಕನ್ನಡ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟದ ಎಲ್ಲಾ ನಾಯಕರು, ಜನಪ್ರತಿನಿಧಿಗಳು ಭಾಗವಹಿಸಿ, ದಕ್ಷಿಣ ಕನ್ನಡದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಮರಿಗೆ ಆಗುವ ಅನ್ಯಾಯ, ದೌರ್ಜನ್ಯ ಹಾಗೂ ಗೃಹ ಇಲಾಖೆಯ ವೈಪಲ್ಯವನ್ನು ಖಂಡಿಸಿ,
ಪಕ್ಷದಲ್ಲಿ ನಿರ್ವಹಿಸುತ್ತಿರುವ ವಿವಿಧ ಹುದ್ದೆ ಮತ್ತು ಜನಪ್ರಧಿನಿಧಿಗಳ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ಕೊಡುವುದಾಗಿ ತೀರ್ಮಾನಿಸಲಾಗಿದೆ. ಸಮುದಾಯದ ಹಿತದೃಷ್ಠಿಯಿಂದ ಈ ಸಭೆಗೆ ಸಮುದಾಯದ ಎಲ್ಲಾ ಜನಪ್ರತಿನಿಧಿಗಳು ಕಡ್ಡಾಯವಾಗಿ ಹಾಜರಾಗಿ, ಈ ಸಭೆಗೆ ಬರುವಾಗ ಎಲ್ಲಾ ಜನಪ್ರತಿನಿಧಿಗಳು ರಾಜೀನಾಮೆ ಪತ್ರವನ್ನು ತರಬೇಕಾಗಿ ಕೇಳಿಕೊಳ್ಳುತ್ತೇವೆ .

ಅಧ್ಯಕ್ಷರು ದಕ್ಷಿಣ ಕನ್ನಡ ಕಾಂಗ್ರೆಸ್ ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ
