ಶಿವಮೊಗ್ಗ: ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ಪ್ರಕರಣ ದಾಖಲು

ರಾಜ್ಯ

ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧ ಮತ್ತೊಮ್ಮೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಲೈಂಗಿಕ ಆರೋಪದ ಮೇಲೆ ಮೂರು ತಿಂಗಳ ಕಾಲ ಅಮಾನತಾಗಿದ್ದ ಹೆಬ್ಬಾರ್‌ ವಿರುದ್ಧ ಈಗ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪ ಕೇಳಿಬರುತ್ತಿದ್ದಂತೆ ಡಾ. ಅಶ್ವಿನ್ ಹೆಬ್ಬಾರ್ ಕರ್ತವ್ಯಕ್ಕೆ ಗೈರಾಗಿದ್ದಾರೆ. ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದಾರೆ.

ಈ ಘಟನೆ ಕುರಿತು ಶಿವಮೊಗ್ಗ ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಕಾಲೇಜಿನ ಆಂತರಿಕ ತನಿಖಾ ವರದಿ ಮತ್ತು ಪೊಲೀಸ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ವರದಿಗಳನ್ನು ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ.