‘ಸತ್ಯವನ್ನು ಪರಿಶೀಲಿಸದೆ ಗೊಂದಲಮಯ ಸುದ್ದಿ ಹರಡುವುದು ಆರೋಗ್ಯಕರ ಪತ್ರಿಕೋದ್ಯಮದ ಲಕ್ಷಣವಲ್ಲ’
ದ್ವಿಚಕ್ರ ವಾಹನಗಳಿಗೆ ಟೋಲ್ ಗಳಲ್ಲಿ ತೆರಿಗೆ ವಿಧಿಸುವ ಉದ್ದೇಶವೇ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿರವರು ಗುರುವಾರ ಸ್ಪಷ್ಟಪಡಿಸಿದ್ದಾರೆ. ದ್ವಿಚಕ್ರ ವಾಹನಗಳಿಗೆ ಹೆದ್ದಾರಿ ಬಳಕೆದಾರ ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬುದಾಗಿ ಕೆಲವು ಮಾಧ್ಯಮಗಳು ಕಪೋಕಲ್ಪಿತ ವರದಿಗಳನ್ನು ಮಾಡಿದ ಹಿನ್ನೆಲೆಯಲ್ಲಿ ಕಠಿಣ ಶಬ್ದಗಳಲ್ಲಿ ಟ್ವೀಟ್ ಮಾಡಿರುವ ಗಡ್ಕರಿ, ‘ಸತ್ಯವನ್ನು ಪರಿಶೀಲಿಸದೆ ಗೊಂದಲಮಯ ಸುದ್ದಿ ಹರಡುವುದು ಆರೋಗ್ಯಕರ ಪತ್ರಿಕೋದ್ಯಮದ ಲಕ್ಷಣವಲ್ಲ’ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೂಡ ಒಂದು ಫ್ಯಾಕ್ಟ್ಚೆಕ್ ಪೋಸ್ಟ್ನಲ್ಲಿ ‘ಇದು ಸುಳ್ಳು ಸುದ್ದಿ’ ಎಂದು ಸ್ಪಷ್ಟಪಡಿಸಿದೆ. ಇತ್ತೀಚೆಗೆ ಕೆಲವು ಮಾಧ್ಯಮಗಳು ಸತ್ಯಾಸತ್ಯತೆಯನ್ನು ಅರಿಯದೆ, ಸುಳ್ಳು ಸುದ್ದಿ ಹಬ್ಬಿಸಿ, ಸಮಾಜದಲ್ಲಿ ತಪ್ಪು ಸಂದೇಶ ನೀಡುವುದು ಒಂದು ಚಾಳಿಯಾಗಿ ಬಿಟ್ಟಿದೆ.
