ಡ್ರಗ್ಸ್ ದಂಧೆಯ ವಿರುದ್ಧ ಮಂಗಳೂರು ಕಮೀಷನರ್ ಸಮರ

ಕರಾವಳಿ

ರಾಹುಲ್, ಜಬ್ಬಾರ್, ರಿಚರ್ಡ್ ಸೇರಿದಂತೆ 8 ವಿದ್ಯಾರ್ಥಿಗಳು ಅರೆಸ್ಟ್; ನಗರದ ಕಾಲೇಜೊಂದರ ವಿದ್ಯಾರ್ಥಿಗಳು

ಮಂಗಳೂರು ಕಮೀಷನರ್ ಅನುಪಮ್ ಅಗರವಾಲ್ ಡ್ರಗ್ಸ್ ದಂಧೆ ಮಟ್ಟ ಹಾಕಲು ನಿರಂತರ ಶ್ರಮಿಸುತ್ತಿದ್ದು, ಬಹುಪಾಲು ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿರುವುದರಿಂದ ವಿದ್ಯಾರ್ಥಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇನ್ನಾದರೂ ಸರಿಯಾಗಿ, ಕಾಲೇಜಿಗೆ ಬರುವಂತೆ ಮಾಡಬೇಡಿ ಎಂದು ವಿಡಿಯೋ ಮುಖಾಂತರ ಮನವಿ ಮಾಡಿದ್ದರು.

ಇದೀಗ ಮಂಗಳೂರು ನಗರದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ 8 ವಿದ್ಯಾರ್ಥಿಗಳು ಪೊಲೀಸರ ಕೈಗೆ ತಗುಲಾಕಿಕೊಂಡಿದ್ದಾರೆ. ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಗೆ ಇಳಿದ ಪಾಂಡೇಶ್ವರ ಇನ್ಸ್ ಪೆಕ್ಟರ್ ಗುರುರಾಜ್ ನೇತೃತ್ವದ ತಂಡ ಬಂದರು ಧಕ್ಕೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ 8 ಮಂದಿ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರು ನಗರದ ಕಾಲೇಜೊಂದರ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ.

ಬಂಧಿತ ವಿದ್ಯಾರ್ಥಿಗಳನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.