ಮೀನಾಕ್ಷಿ ಆರ್ಯ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಂಗಳೂರು ಉಪ-ವಿಭಾಗ
2023ನೇ ಬ್ಯಾಚ್ನ ಮೂವರು ಐಎಎಸ್ ಅಧಿಕಾರಿಗಳಿಗೆ ಉಪ ವಿಭಾಗಾಧಿಕಾರಿಗಳ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪಿ. ಶ್ರವಣ್ ಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲಾ ಕುಮಟಾ ಉಪ ವಿಭಾಗದ ಉಪ-ವಿಭಾಧಿಕಾರಿಯಾಗಿ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
ದಿನೇಶ್ ಕುಮಾರ್ ಮೀನಾ ಅವರಿಗೆ ಚಾಮರಾಜ ನಗರ ಜಿಲ್ಲಾ ಕೊಳ್ಳೇಗಾಲ ಉಪ-ವಿಭಾಗದ ಉಪ ವಿಭಾಗಾಧಿಕಾರಿ ಹುದ್ದೆ ನೀಡಲಾಗಿದೆ. ಮೀನಾಕ್ಷಿ ಆರ್ಯ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಂಗಳೂರು ಉಪ-ವಿಭಾಗದ ಉಪ ವಿಭಾಗಾಧಿಕಾರಿ ಹುದ್ದೆ ನೀಡಿ ಆದೇಶ ಹೊರಡಿಸಲಾಗಿದೆ.
