ಬೆಂಗಳೂರಿನಲ್ಲಿ ಟಿನೇಜ್ ಪ್ರಗ್ನೆನ್ಸಿ ಪ್ರಕರಣ ಏರಿಕೆ. ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲು

ರಾಜ್ಯ

ಕರ್ನಾಟಕದಲ್ಲಿ ಹದಿನೆಂಟು ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೂ ವರ್ಷದಿಂದ ವರ್ಷಕ್ಕೆ ಟಿನೇಜ್ ಪ್ರಗ್ನೆನ್ಸಿ ಏರಿಕೆ ಕಾಣುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ಅರ್ಬನ್​ನಲ್ಲಿ 8891 ದಾಖಲಾಗಿವೆ. ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳು ಆಘಾತಕಾರಿಯಾಗಿವೆ.

ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22,000 ಸಾವಿರ ಹಾಗೂ ಬೆಂಗಳೂರು ಅರ್ಬನ್​​ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. ಹೀಗಾಗಿ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಹದಿನಾಲ್ಕು ವಯಸ್ಸಿನಲ್ಲಿ ಅತೀ ಹೆಚ್ಚು ಬಾಲಕಿಯರು ಗರ್ಭಿಣಿ ಆಗುತ್ತಿದ್ದಾರೆ. ಇದಕ್ಕೆ ಅರಿವಿನ ಕೊರತೆ, ಬಾಲ್ಯ ವಿವಾಹ, ಅನಕ್ಷರತೆ ಮತ್ತು ಬಡತನ, ಸಾಮಾಜಿಕ ಅಭದ್ರತೆ ಇವುಗಳೇ ಟೀನೇಜ್ ಪ್ರೆಗ್ನೆನ್ಸಿಗೆ ಪ್ರಮುಖ ಕಾರಣಗಳಾಗಿವೆ. ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡಾ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.