1998 ಡಿಸೆಂಬರ್ 31ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಪ್ರಕರಣದಲ್ಲಿ ಕಳೆದ 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಕಳೆದ 26 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು. ಹಿಂದಿನ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡಿರುವ ಬಗ್ಗೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಈ ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ ಹಿರಿಯ CJ & JMFC ನ್ಯಾಯಾಲಯ ಮೂಡಬಿದ್ರಿರವರು CC. No 665/2014, LPC No 10/2017 ಪ್ರಕರಣವೆಂದು ಘೋಷಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಪಕ್ಷಿಕೆರೆ ಲೀಲಾಧರ ಎಂಬವರನ್ನು ವಿದೇಶದಿಂದ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ.

ಇತ್ತೀಚೆಗೆ ಇದೇ ಪ್ರಕರಣದ ಇನ್ನೊಬ್ಬ ಆರೋಪಿ ಪಡು ಪಣಂಬೂರು ನಿವಾಸಿ ಚಂದ್ರಹಾಸ್ ಕೇಶವ ಶೆಟ್ಟಿ ಎಂಬಾತನನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿತ್ತು.
