ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಮಂಗಳೂರು ನ್ಯಾಯಾಲಯಕ್ಕೆ ಶರಣು

ಕರಾವಳಿ

ಮಂಗಳೂರು: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಅಶ್ರಫ್ ಕಲಾಯಿ ಹತ್ಯೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿ ಭರತ್ ಕುಮ್ಡೇಲು ಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

2025ರ ಮೇ 27ರಂದು ಕೊಳತ್ತಮಜಲಿನ ಪಿಕಪ್ ಚಾಲಕ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿದೆ. ಅಶ್ರಫ್ ಕಲಾಯಿ ಕೊಲೆ ಪ್ರಕರಣ ಸಂಬಂಧ ಕೂಡ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ ಎನ್ನಲಾಗಿದೆ

ಈತನ ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆ ಸಹಿತ ದ.ಕ ಜಿಲ್ಲೆಯಲ್ಲಿ ಸರಿ ಸುಮಾರು 15 ಕ್ಕೂ ಮಿಕ್ಕ ಪ್ರಕರಣಗಳು ದಾಖಲಾಗಿದೆ. ಇತ್ತೀಚೆಗೆ ಈತನ ವಿರುದ್ದ ಕೆಕೋಕಾ (KKOCA)ಜಾರಿಗೊಳಿಸಲಾಗಿದೆ.