ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ ಎಂಬವರು ಇಚರ್ ವಾಹನದಲ್ಲಿ ಹತ್ತು ಜಾನುವಾರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಪೊಲೀಸರು ವಾಹನ ನಿಲ್ಲಿಸಲು ಸೂಚಿಸಿದರೂ ಆರೋಪಿಗಳು ವಾಹನವನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಸರಿ ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು.
ಆರೋಪಿಯು ಪೊಲೀಸರ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪೊಲೀಸರನ್ನೇ ಯಮಾರಿಸಲು ಪ್ರಯತ್ನಿಸಿರುತ್ತಾರೆ. ಅ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. ಒಂದು ಗುಂಡು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಗುಂಡು ಆರೋಪಿಯ ಕಾಲಿಗೆ ಬಿದ್ದಿರುತ್ತದೆ.

ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನಾಗ್ಗಿದ್ದು,
ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಕೇಸು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
