ಮದುವೆಯಾಗುವ ಭರವಸೆ ನೀಡಿ, ಮಹಿಳೆ ಮೇಲೆ ಅತ್ಯಾಚಾರ; ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಪ್ರಕರಣ ದಾಖಲು, ಎಎಸ್ಐ ಅಮಾನತು

ರಾಜ್ಯ

ಮದುವೆಯಾಗುವ ಭರವಸೆ ನೀಡಿ, ಮಹಿಳೆ ಮೇಲೆ ಅತ್ಯಾಚಾರ ಆರೋಪದ ಅಡಿಯಲ್ಲಿ ಡಿಜೆ ಹಳ್ಳಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೂರ್ವ ವಿಭಾಗದ ಗೋವಿಂದಪುರ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಇನ್ಸ್ ಪೆಕ್ಟರ್ ಸುನಿಲ್ ಮತ್ತು ಎಎಸ್‌ಐ ಪ್ರಕಾಶ್ ರಾಥೋಡ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಪ್ರಕಾಶ್ ರಾಥೋಡ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅಲ್ಪಸಂಖ್ಯಾತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ರಿಜಿಸ್ಟ್ರಾರ್ ಮ್ಯಾರೇಜ್ ಆಗುವುದಾಗಿ ಇನ್ಸ್ ಪೆಕ್ಟರ್ ಸುನಿಲ್ ಹೇಳಿದ್ದರಂತೆ. ಎಂಟನೇ ಮೈಲಿಯಲ್ಲಿರುವ ಮನೆ ಮತ್ತೆ ಹೋಟೆಲ್ ಗೆ ಕರೆಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ನಿನ್ನನ್ನು ಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಪ್ರತಿ ಬಾರಿಯೂ ವಿಡಿಯೋ ಕಾಲ್ ಮಾಡು ಎಂದು ಆರೋಪಿ ಪೀಡಿಸುತ್ತಿದ್ದ. ಘಟನೆ ಸಂಭಂದ 36 ವರ್ಷದ ಸಂತ್ರಸ್ತೆ ಡಿಜಿ ಕಚೇರಿಗೆ ದೂರು ನೀಡಿದ್ದು, ಸದ್ಯ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ಸಂಬಂಧ ಪ್ರಕರಣ ದಾಖಲಾಗಿದೆ.