ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿಮಾಲ್​​ಗೆ ಬೀಗ ಜಡಿದ ಅಧಿಕಾರಿಗಳು

ರಾಜ್ಯ

ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಅಧಿಕಾರಿಗಳು ಮತ್ತೆ ಬೀಗ ಜಡಿದಿದ್ದಾರೆ.
ಈ ಹಿಂದೆಯೂ ಕೋಟ್ಯಾಂತರ ತೆರಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಮಾಲ್ ನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೀಗ ಜಡಿದಿದ್ದಾರೆ.

ಬರೋಬ್ಬರಿ 30,81,45,600 ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಮಾಲ್​ ಅನ್ನು ಸೀಜ್ ಮಾಡಿ ನೋಟಿಸ್ ಕಳುಹಿಸಿದ್ದಾರೆಂದು ತಿಳಿದುಬಂದಿದೆ. ಮಂತ್ರಿ ಮಾಲ್’ಗೆ ಬೀಗ ಹಾಕಿದ್ದರಿಂದ ಮಾಲ್ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಇತ್ತ ಮಾರ್ಷಲ್ಸ್ ಮತ್ತು ಪೊಲೀಸರು ಮಾಲ್ ಬಳಿಯೇ ಬೀಡುಬಿಟ್ಟಿದ್ದಾರೆ.