ಬೆಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 4.20 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ಆರೋಪಿಗಳ ಬಂಧನ

ರಾಜ್ಯ

ಬೆಂಗಳೂರಿನಲ್ಲಿ ರಾಜಾರೋಷವಾಗಿ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲಾಗುತ್ತಿದೆ. ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಖದೀಮರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ನೈಜರಿಯಾ ಮೂಲದ ಒಬಿಜೆಸಿ ಚಿಗೋಜೈ ದಾವಿ, ಸನಿ ಸಾದಿಕ್, ಬೆಂಗಳೂರಿನ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಆರೋಪಿಗಳಿಂದ ಬರೋಬ್ಬರಿ 4.20 ಕೋಟಿ ರೂ. ಮೌಲ್ಯದ ಡ್ರಗ್ಸ್ ಪೊಲೀಸರಿಂದ ಜಪ್ತಿ ಮಾಡಲಾಗಿದೆ. ಆರೋಪಿಗಳು ಬಾಗಲೂರು, ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ಅವರು ಪರಿಚಯಸ್ಥರು, ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಸಿಸಿಬಿ ಪೊಲೀಸರು ಬಾಗಲೂರು ವ್ಯಾಪ್ತಿಯಲ್ಲಿ 1.20 ಕಿಲೋ ಗ್ರಾಂ ಎಂಡಿಎಂಎ, ಅಶೋಕನಗರದಲ್ಲಿ 2 ಕೋಟಿ ಮೌಲ್ಯದ ಹೈಡ್ರೊ ಗಾಂಜಾ ಜಪ್ತಿ ಮಾಡಿದ್ದಾರೆ. ಸಿಸಿಬಿ ಪೊಲೀಸರು ಒಟ್ಟು 4.20 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸೀಜ್ ಮಾಡಿದ್ದಾರೆ.