ರಾಜ್ಯದಲ್ಲಿ ಜಿಲ್ಲಾ ಪಂಚಾಯಿತ್, ತಾಲೂಕು ಪಂಚಾಯಿತ್ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯತ್, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್ ತಿಂಗಳಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆದಿರಲಿಲ್ಲ. ಗ್ರಾಮ ಪಂಚಾಯತ್ ಗಳ ಅವಧಿಯೂ ಮುಗಿಯುತ್ತಿದೆ. ಜಿ.ಪಂ., ತಾ.ಪಂ. ಚುನಾವಣೆ ವಿಳಂಬದ ಕೇಸ್ ಕೋರ್ಟ್ ನಲ್ಲಿದ್ದು, ತ್ವರಿತಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವೂ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ಏಪ್ರಿಲ್ ನಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
