ವಿಪರೀತ ರಸ್ತೆ ಅಪಘಾತ: ಹೈವೇ ಬದಿಯ ಅಕ್ರಮ ಢಾಬಾಗಳ ತೆರವಿಗೆ ಸುಪ್ರೀಂ ಕೋರ್ಟ್ ಸೂಚನೆ

ರಾಷ್ಟ್ರೀಯ

ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್ ಪ್ರೆಸ್ ವೇಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಖಿಲ ಭಾರತ ಮಾರ್ಗಸೂಚಿ ರೂಪಿಸುವ ಬಗ್ಗೆ ಒಲವು ತೋರಿದೆ. ಇದರ ಪರಿಣಾಮ ಹೆದ್ದಾರಿ ಪಕ್ಕದ ಅಕ್ರಮ ಢಾಬಾಗಳಿಗೆ ಕಡಿವಾಣ ಬೀಳುವ ಸಾಧ್ಯತೆ ಹೆಚ್ಚಾಗಿದೆ.

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್ ಪ್ರೆಸ್ ವೇ ಗಳ ಎರಡೂ ಬದಿಗಳಲ್ಲಿ ಅಕ್ರಮ ಢಾಬಾಗಳ ನಿರ್ಮಾಣವು ರಸ್ತೆ ಅಪಘಾತಗಳಿಗೆ ಸಂಭವನೀಯ ಕಾರಣ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಹೇಳಿದೆ. ಅಲ್ಲದೆ ಇವುಗಳ ವಿರುದ್ದ ಕ್ರಮ ಕೈಗೊಳ್ಳಲು ಶಾಸನಬದ್ಧ ನಿಯಮಗಳ ಮಾಹಿತಿ ಸಲ್ಲಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.