ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್ ಬಂಧನ

ಕರಾವಳಿ

ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್, ಮುಸ್ತಫಾ ಮಂಜಿಲ್, ಉಪ್ಪಳ, ಕಾಸರಗೋಡು. ಎಂಬಾತನ ಮೇಲೆ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಿ ಸುಮಾರು 19 ಪ್ರಕರಣಗಳು ದಾಖಲಾಗಿದ್ದು, ದ.ಕ ಜಿಲ್ಲೆಯ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತದೆ. ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.

ಕಾವೂರು ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಈತನಿಗೆ ದಸ್ತಗಿರಿ ವಾರಂಟ್ ಹೊರಡಿಸಿರುತ್ತದೆ. ಕೋಣಾಜೆ ಠಾಣಾ ವ್ಯಾಪ್ತಿಯ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿರುತ್ತದೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಒಂದು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿರುತ್ತದೆ.

ಅಬ್ದುಲ್ ರವೂಫ್ @ ಮೀಸೆ ರವೂಫ್, ಅಂತರಾಜ್ಯ ನಟೋರಿಯಸ್ ಕ್ರಿಮಿನಲ್ ಆಗಿದ್ದು, ಕೇರಳ ರಾಜ್ಯದ ಉಪ್ಪಳ ಪೈವಳಿಕೆಯ ಇಸುಬು ಜಿಯಾದ್ @ ಜಿಯಾ ಎಂಬಾತನ ಸಹಚರ. ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಮೇಲೆ ಈಗಾಗಲೇ ಮಂಜೇಶ್ವರ ಹಾಗೂ ಮಂಗಳೂರಲ್ಲಿ ಒಟ್ಟು 25 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುತ್ತದೆ.

ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಉತ್ತರ ಉಪ ವಿಭಾಗದ ಎ.ಸಿ.ಪಿ. ಶ್ರೀಕಾಂತ. ಕೆ. ರವರ ಮಾರ್ಗದರ್ಶನದಲ್ಲಿ PSI ಚಂದ್ರಶೇಖರ್, ಸಿಬ್ಬಂದಿಗಳಾದ ರೆಜಿ ವಿ.ಎಂ, ದಾಮೋದರ.ಕೆ ಮತ್ತು ಹಾಲೇಶ್ ನಾಯ್ಕ್ ರವರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.