ವರ್ಷಕ್ಕೆ ಎರಡು ಲಕ್ಷಕ್ಕೂ ಅಧಿಕ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ ಹೆಚ್ಚು ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ ಎಂದು ಚಳಿಗಾಲದ ಅಧಿವೇಶನದಲ್ಲಿ ವಿದೇಶಾಂಗ ಸಚಿವಾಲಯವು ಅಂಕಿ ಅಂಶಗಳ ಸಹಿತ ಸಂಸತ್ತಿಗೆ ಮಾಹಿತಿ ನೀಡಿದೆ. ಇದರಲ್ಲಿ ಹಲವಾರು ಮಂದಿ ವೈಯಕ್ತಿಕ ಅನುಕೂಲಕ್ಕಾಗಿ ವಿದೇಶಿ ಪೌರತ್ವವನ್ನು ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ಹುಟ್ಟಿ ಬೆಳೆದ ಊರು ಬಿಟ್ಟು ಬರುವುದೇ ಕಷ್ಟವಾಗಿರುತ್ತದೆ. ಹೀಗಿರುವಾಗ ಲಕ್ಷಾಂತರ ಭಾರತೀಯರು ದೇಶವನ್ನೇ ಶಾಶ್ವತವಾಗಿ ಬಿಟ್ಟು ಹೋಗುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸುಮಾರು ಲಕ್ಷಾಂತರ ಭಾರತೀಯರು ದೇಶವನ್ನು ಬಿಟ್ಟು ಹೋಗಿದ್ದಾರೆ. 2020 ರಿಂದ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ಬಿಟ್ಟು ಬೇರೆಬೇರೆ ದೇಶಗಳ ಪೌರತ್ವವನ್ನು ಪಡೆದಿದ್ದಾರೆ. 2022ರಿಂದ ಪ್ರತಿ ವರ್ಷ ಎರಡು ಲಕ್ಷಕ್ಕೂ ಹೆಚ್ಚು ಭಾರತೀಯ ಭಾರತೀಯ ಪೌರತ್ವವನ್ನು ತ್ಯಜಿಸುತ್ತಿದ್ದಾರೆ ಎಂಬುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಕೋವಿಡ್ ಸಾಂಕ್ರಾಮಿಕದ ಬಳಿಕ ದೇಶವನ್ನು ತ್ಯಜಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದಾಗಿ ವಿದೇಶಾಂಗ ಸಚಿವಾಲಯದ ಅಂಕಿ ಅಂಶಗಳು ತಿಳಿಸುತ್ತವೆ. 2011 ಮತ್ತು 2024 ರ ನಡುವೆ 2.06 ಮಿಲಿಯನ್ ಅಂದರೆ 20 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದರಲ್ಲಿ ಅರ್ಧದಷ್ಟು ಕಳೆದ ಐದು ವರ್ಷಗಳಲ್ಲಿ ನಡೆದಿದೆ. ಹಿಂದಿನ 14 ವರ್ಷಗಳಿಗೆ ಹೋಲಿಸಿದರೆ ಸುಮಾರು ಒಂದು ದಶಕದವರೆಗೆ ವಾರ್ಷಿಕವಾಗಿ ಪ್ರತಿ ವರ್ಷ 1.2 ಲಕ್ಷದಿಂದ 1.45 ಲಕ್ಷ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದರು. ಆದರೆ 2022ರಿಂದ ವಾರ್ಷಿಕವಾಗಿ 2 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ವೈಯಕ್ತಿಕ ಅನುಕೂಲಕ್ಕಾಗಿ ವಿದೇಶಿ ಪೌರತ್ವವನ್ನು ಆಯ್ಕೆ ಮಾಡುತ್ತಿರುವುದಾಗಿ ಅನೇಕರು ತಿಳಿಸಿರುವುದು ವಿದೇಶಾಂಗ ಸಚಿವಾಲಯದ ಮಾಹಿತಿ ತಿಳಿಸಿದೆ.
