ಡಿ. 29, 30 : ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ

ಕರಾವಳಿ

ಡಿ. 31 ಹಾಗೂ ಜನವರಿ 1 ರಂದು ದಿ| ನಿ.ಬೀ.ಅಣ್ಣಾಜಿ ಬಲ್ಲಾಳರ ಸ್ಮರಣಾರ್ಥ ಅಂಬಲಪಾಡಿ ನಾಟಕೋತ್ಸವ

ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ಈ ವರ್ಷದ “ರಂಗಭೂಮಿ ರಂಗ ಶಿಕ್ಷಣ” ಅಭಿಯಾನದಲ್ಲಿ ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250 ಕ್ಕೂ ಅಧಿಕ ಮಕ್ಕಳ ಭಾಗವಹಿಸುವಿಕೆಯಲ್ಲಿ 11 ಹೆಸರಾಂತ ನಿರ್ದೇಶಕರಿಂದ ತಯಾರಾದ 11 ಕಿರು ನಾಟಕಗಳ ಪ್ರದರ್ಶನ `ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ‘ ಡಿ.29 ಮತ್ತು ಡಿ.30 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ತನಕ ಎಂಜಿಎA ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಡಿ.29 ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉದ್ಘಾಟಿಸಲಿದ್ದಾರೆ. ರಂಗಭೂಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಭುವನೇಂದ್ರ ಕಿದಿಯೂರು, ಹರಿಪ್ರಸಾದ್ ರೈ, ಎಂಜಿಎo ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎಂ. ವಿಶ್ವನಾಥ ಪೈ, ರಂಗಶಿಕ್ಷಣ ಸಂಚಾಲಕ ವಿದ್ಯಾವಂತ ಆಚಾರ್ಯ ಉಪಸ್ಥಿತರಿರುವರು.

ಸಮಾರೋಪ ಡಿ.30ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಅದಾನಿ ಗ್ರೂಪ್ಸ್ನ ಅಧ್ಯಕ್ಷ ಕಿಶೋರ್ ಆಳ್ವ ಸಮಾರೋಪ ಭಾಷಣ ಮಾಡಲಿದ್ದಾರೆ. ಉದ್ಯಮಿಗಳಾದ ಜಮಾಲುದ್ದೀನ್ ಅಬ್ಬಾಸ್, ಅಲಯನ್ಸ್ ಜಿಲ್ಲೆ 275ಎಸ್‌ರ ಜಿಲ್ಲಾ ಗವರ್ನರ್ ಅಲೈ ಸುನೀಲ್ ಸಾಲ್ಯಾನ್, ಉದ್ಯಮಿ ಪೆರ್ಣಂಕಿಲ ಶ್ರೀಶ ನಾಯಕ್, ಎಂಜಿಎo ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಹಾಗೂ ರಂಗಶಿಕ್ಷಣ ಸಂಚಾಲಕ ವಿದ್ಯಾವಂತ ಆಚಾರ್ಯ ಉಪಸ್ಥಿತರಿರುವರು.

ಡಿ.29ರಂದು ಬೆಳಗ್ಗೆ 10.45ಕ್ಕೆ ಕುಂಜಿಬೆಟ್ಟು ಶಾರದಾ ರೆಸಿಡೆನ್ಶಿಯಲ್ ಸ್ಕೂಲಿನ ಮಕ್ಕಳಿಂದ ‘ಪುಷ್ಪರಾಣಿ’, ಬೆಳಗ್ಗೆ 11.45ಕ್ಕೆ ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಮಕ್ಕಳಿಂದ ‘ಕಾಡಿನ ಪಕ್ಷಿ ಪ್ಯಾಟೆಗೆ ಬಂತು’, ಮಧ್ಯಾಹ್ನ 12.45ಕ್ಕೆ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲಿನ ಮಕ್ಕಳಿಂದ ‘ಅಳಿಲು ಮರಿಯ ಹೊರಳು ಸೇವೆ’, ಅಪರಾಹ್ನ 2.30ಕ್ಕೆ ಆದಿ ಉಡುಪಿ ಪ್ರೌಢಶಾಲೆಯ ಮಕ್ಕಳಿಂದ ಲಂಬಕರ್ಣನ ಉಷ್ಣೇಶ, ಅಪರಾಹ್ನ 3.30ಕ್ಕೆ ಉಡುಪಿ ಬೋರ್ಡ್ ಹೈಸ್ಕೂಲ್ ಮಕ್ಕಳಿಂದ ‘ಕಾವ್ಯ ಕಥಾನಾಟಕ’ ಹಾಗೂ ಸಂಜೆ 4.30ಕ್ಕೆ ಮಣಿಪಾಲ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಮಕ್ಕಳಿಂದ ‘ಕಾಮನ್‌ಸೆನ್ಸ್ ‘ ನಾಟಕ ಪ್ರದರ್ಶನಗೊಳ್ಳಲಿವೆ.

ಡಿ.30ರಂದು ಬೆಳಗ್ಗೆ 9.30ಕ್ಕೆ ಉಡುಪಿ ಬೈಲಕೆರೆ ಶ್ರೀ ಅನಂತೇಶ್ವರ ಪ್ರೌಢಶಾಲೆಯ ಮಕ್ಕಳಿಂದ ‘ಒಮ್ಮೆ ಸಿಕ್ಕರೆ ‘ನಾಟಕ, 11 ಗಂಟೆಗೆ ನಿಟ್ಟೂರು ಪ್ರೌಢಶಾಲಾ ಮಕ್ಕಳಿಂದ ‘ಕತ್ತಲೆ ನಗರ ತಲೆಕೆಟ್ಟ ರಾಜ’, ಮಧ್ಯಾಹ್ನ 2 ಗಂಟೆಗೆ ಕುಂಜಿಬೆಟ್ಟು ಟಿಎ ಪೈ ಆಂಗ್ಲ ಮಾಧ್ಯಮ ಶಾಲೆಯಿಂದ ‘ತಾರೆ’ ಅಪರಾಹ್ನ 3 ಗಂಟೆಗೆ ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಮಕ್ಕಳಿಂದ ‘ಅಳಿಲು ರಾಮಾಯಣ’ ಹಾಗೂ ಸಂಜೆ 4 ಗಂಟೆಗೆ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ‘ಎಂಡ್ ಇಲ್ಲದ ಬಂಡ್ ಅವತಾರ ‘ ನಾಟಕಗಳು ಪ್ರದರ್ಶನಗೊಳ್ಳಲಿವೆ.
ಡಿ.29ರಂದು 6 ಹಾಗೂ ಡಿ.30ರಂದು 5 ಶಿಕ್ಷಣ ಸಂಸ್ಥೆಗಳ ಮಕ್ಕಳಿಂದ ನಾಟಕ ಪ್ರದರ್ಶನಗಳು ನಡೆಯಲಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಡಿ. 31 ಹಾಗೂ ಜನವರಿ 1 ರಂದು ದಿ|ನಿ.ಬೀ.ಅಣ್ಣಾಜಿ ಬಲ್ಲಾಳರ ಸ್ಮರಣಾರ್ಥ ಅಂಬಲಪಾಡಿ ನಾಟಕೋತ್ಸವ

ರಂಗಭೂಮಿ (ರಿ.) ಉಡುಪಿ ವತಿಯಿಂದ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ದಿ.ನಿ.ಬೀ.ಅಣ್ಣಾಜಿ ಬಲ್ಲಾಳರ ಸ್ಮರಣಾರ್ಥ ‘ಅಂಬಲಪಾಡಿ ನಾಟಕೋತ್ಸವ ‘ (ನೀನಾಸಂ ತಿರುಗಾಟ -2025ರ ನಾಟಕಗಳ ಪ್ರದರ್ಶನ) ಡಿಸೆಂಬರ್ 31 ಮತ್ತು 2026ರ ಜನವರ 1 ರಂದು ಸಂಜೆ 6.30ಕ್ಕೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ. ಪತ್ರಿಕಾ ಗೋಷ್ಠಿಯಲ್ಲಿ ರಂಗಭೂಮಿಯ ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.