ಅಧಿಕ ಬಡ್ಡಿಗೆ ಸಾಲ ನೀಡಿ, ಬಳಿಕ ಸಾಲ ಪಡೆದವರನ್ನು ಬೆದರಿಸಿ ಬಲವಂತವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದ ಪ್ರಕರಣದಲ್ಲಿ ಕೋಡಿಕೆರೆ ಗ್ಯಾಂಗಿನ ನಾಲ್ವರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗಜೇಂದ್ರ ಬಜಿಲಕೇರಿ, ಶರತ್ ಗಟ್ಟಿ, ಪ್ರದೀಪ್ ಮತ್ತು ಧನರಾಜ್ ವಳಚ್ಚಿಲ್ ಎಂದು ಗುರುತಿಸಲಾಗಿದ್ದು, ಇವರು ಮನೋಜ್ ಕೋಡಿಕೆರೆ ಗ್ಯಾಂಗ್ ನ ಸದಸ್ಯರು.

ಬಡ್ಡಿಗೆ ಹಣ ನೀಡಿ ಬಡ್ಡಿ ದಂಧೆ ನಡೆಸುತ್ತಿದ್ದ ಆರೋಪಿಗಳು ಬೆದರಿಸಿ ಬಡ್ಡಿ ವಸೂಲಿ ಮಾಡುತ್ತಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ತಲೆ ಮರೆಸಿಕೊಂಡಿರುವ ಮನೋಜ್ ಕೋಡಿಕೆರೆ ಮತ್ತು ಅವಿನಾಶ್ ಎಂಬವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
