ವಿಟ್ಲ: ಗಣೇಶ್ ಪೂಜಾರಿ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು

ಕರಾವಳಿ

ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪ-ವಿಭಾಗೀಯ ದಂಡಾಧಿಕಾರಿಗಳು ಇವರ ಆದೇಶದ ಮೇರೆಗೆ ಗಣೇಶ ಯಾನೆ ಗಣೇಶ್ ಪೂಜಾರಿ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ ಯಾನೆ ಗಣೇಶ ಪೂಜಾರಿ, ಬಡಕೋಡಿ, ಕೇಪು ಗ್ರಾಮ, ಬಂಟ್ವಾಳ ತಾಲೂಕು. ಈತನ ಮೇಲೆ ಹಲ್ಲೆ, ದೊಂಬಿ, ಕೊಲೆಯತ್ನ, ಜೂಜು ಮತ್ತು ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಯಂತಹ ಒಟ್ಟು14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯ ಮೇರೆಗೆ ಸಹಾಯಕ ಆಯುಕ್ತರು ಹಾಗೂ ಉಪ-ವಿಭಾಗೀಯ ದಂಡಾಧಿಕಾರಿ, ಮಂಗಳೂರು ಇವರು, ಗಣೇಶ ಯಾನೆ ಗಣೇಶ್ ಪೂಜಾರಿ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ.

ಮಂಗಳೂರು ಸಹಾಯಕ ಆಯುಕ್ತರ ಆದೇಶದಂತೆ ಸದರಿ ಗಣೇಶ್ ಪೂಜಾರಿಯನ್ನು ಸುರಕ್ಷಿತವಾಗಿ ಪೊಲೀಸರ ಬಂದೊಬಸ್ತಿನಲ್ಲಿ ಆಲೂರು ಪೊಲೀಸ್‌ ಠಾಣೆಗೆ ಕಳುಹಿಸಿಕೊಡಲಾಗಿದೆ.