ರಾಜ್ಯದಲ್ಲಿ ಗ್ರಾಮಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.
ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ.ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
2026ರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಟ್ಟಣ ಹಾಗೂ ಗ್ರಾಮ ಪಂಚಾಯಿತ್ ಚುನಾವಣೆಗಳಲ್ಲೂ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ. ಮತಗಳ್ಳತನದ ಪ್ರಕರಣಗಳು ಬಯಲಾದ ಬಳಿಕ ಜನಸಾಮಾನ್ಯರಲ್ಲಿ ಇವಿಎಂ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳು ಬಂದಿವೆ. ಆದ್ದರಿಂದ ಸಚಿವ ಸಂಪುಟವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೇಟ್ ಪೇಪರ್ ಮೂಲಕ ನಡೆಸುವಂತೆ ಚುನಾವಣೆ ಆಯೋಗಕ್ಕೆ ತಿಳಿಸಲು ನಿರ್ಧರಿಸಲಾಗಿದೆ. ಗ್ರೇಟರ್ ಬೆಂಗಳೂರು ಚುನಾವಣೆಯನ್ನೂ ಸಹ ಬ್ಯಾಲೆಟ್ ಪೇಪರ್ ನಡೆಸಲು ನಿರ್ಣಯಿಸಿಲಾಗಿದೆ,
ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ 2026ರ ಏಪ್ರಿಲ್- ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರಕಾರ ಸಜ್ಜಾಗಿದ್ದು, ಹೀಗಾಗಿ ಏಪ್ರಿಲ್, ಮೇನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಾಧ್ಯತೆಗಳಿವೆ.
