ಕಡಬ: ಅಕ್ರಮ ಮರಳುಗಾರಿಕೆಗೆ ಪೊಲೀಸರ ದಾಳಿ; ಟಾಟಾ ಹಿಟಾಚಿ, ಎರಡು ಟಿಪ್ಪರ್ ಲಾರಿ ಸಹಿತ ಅಕ್ರಮ ಮರಳು ವಶ

ಕರಾವಳಿ

ಕಡಬ ತಾಲೂಕಿನ ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ಅಕ್ರಮವಾಗಿ ಇಟಾಚಿ ವಾಹನದ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪ-ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿಗಳೊಂದಿಗೆ ದಿನಾಂಕ 16.02.2026 ರಂದು ಬೆಳಿಗ್ಗೆ 10.30 ರ ಸಮಯಕ್ಕೆ ತಕ್ಷೀರು ಸ್ಥಳಕ್ಕೆ ತೆರಳಿದಾಗ ಆರೋಪಿಗಳು ವಾಹನಗಳನ್ನುಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದರು. ಸ್ಥಳದಲ್ಲಿದ್ದ TATA HITACHI ಮತ್ತು KA-21-B-3929 EICHER ಟಿಪ್ಪರ್ ಹಾಗೂ KA-20-D-7639 ಟಿಪ್ಪರ್ ಲಾರಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ

ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 50,000 ಸಾವಿರ ರೂಪಾಯಿ ಮೌಲ್ಯದ 50 ಟನ್ ಮರಳು ಪತ್ತೆಯಾಗಿದೆ. ಸ್ವಾಧೀನಪಡಿಸಿದ ವಾಹನಗಳ ಒಟ್ಟು ಅಂದಾಜು ಮೌಲ್ಯ 20 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 08/2026 ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.