ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ ನಿಯಮ ಉಲ್ಲಂಘನೆ: ಹೈಕೋರ್ಟ್ ಪ್ರಶ್ನೆ

ರಾಜ್ಯ

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ. ಹೀಗೆ ಸ್ಥಾನಮಾನ ನೀಡುವಾಗ ನಿಯಮ ಉಲ್ಲಂಘನೆ ಆಗಿದ್ಯಾಕೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್​​ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ.

ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ ಶೇ.15ರಷ್ಟನ್ನು ಮೀರುವಂತಿಲ್ಲ. ಆದರೆ ಸಚಿವ ಸ್ಥಾನಮಾನದ ಮೂಲಕ ಸಂವಿಧಾನದ ನಿಯಮ ಉಲ್ಲಂಘಿಸಿದ್ದಾರೆಂದು ದೂರುದಾರ ಸೂರಿ ಪಾಯಲ ಪರ ವಕೀಲರು ವಾದ ಮಂಡಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ನಿಲುವು ತಿಳಿಸಲು ಸೂಚಿಸಿ ವಿಚಾರಣೆಯನ್ನು ಮಾರ್ಚ್ 4ಕ್ಕೆ ಮುಂದೂಡಿದೆ. ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಕೆ. ಗೋವಿಂದರಾಜ್‌, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು, ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ನೇಮಕಾತಿ ಪ್ರಶ್ನಿಸಿ ವಕೀಲ ಎಸ್. ಉಮಾಪತಿ ಎಂಬವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದರ ಜೊತೆಗೆ ರಾಜ್ಯ ಸರ್ಕಾರವು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಸೂರಿ ಪಾಯಲ ಎಂಬುವರು ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಿದ್ದು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ 164(1)A ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದರು.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಭಾರೀ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ ವಿರೋಧದ ಚರ್ಚೆಗಳು ಸಹ ನಡೆದಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಸೂರಿ ಪಾಯಲ ಎಂಬುವರು ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಿದ್ದು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ 164(1)A ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ.