ಪುತ್ತೂರು: ಪಿಸ್ತೂಲು ತೋರಿಸಿ ಗುಂಡು ಹೊಡೆಯಲು ಯತ್ನ; ಆರೋಪಿ ಪೊಲೀಸರ ವಶ

ಕರಾವಳಿ

ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರು, ದಿನಾಂಕ 02-03-2026 ರಂದು ಮಧ್ಯಾಹ್ನ, ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಅಬ್ದುಲ್ ಹಕೀಂ ಎಂಬವರಿಗೆ ಪಿಸ್ತೂಲು ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿ ಬೆದರಿಸಿರುತ್ತಾನೆ.

ಈ ವೇಳೆ ಅಬ್ದುಲ್ ಹಕೀಂ ಹಾಗೂ ಇತರರು ಸೇರಿ ಆತನು ಹಿಡಿಯಲು ಹೋದಾಗ ಆತನು ಮೋಟಾರು ಸೈಕಲ್ ನೊಂದಿಗೆ ಪರಾರಿಯಾಗಿರುತ್ತಾನೆ ಎಂಬುದಾಗಿ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ ಸಂ: 26/2026, ಕಲಂ: 351(3) BNS 2023 ರಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ಪ್ರಕರಣದ ತನಿಖೆ ನಡೆಸಿ ಆರೋಪಿತನಾದ ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಎಂಬಾತನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದಿನ ಕಾನೂನು ಕ್ರಮಕೈಗೊಳ್ಳಲಿದ್ದಾರೆ.