ಸುರತ್ಕಲ್ ಪೊಲೀಸರ ಕಾರ್ಯಾಚರಣೆ: ವಾಹನಗಳ ಬಿಡಿಭಾಗಗಳ ಕಳವು ಆರೋಪಿಯ ಬಂಧನ, ಸ್ವತ್ತು ವಶ

ಕರಾವಳಿ

ಸುರತ್ಕಲ್: ರಾತ್ರಿ ಸಮಯದಲ್ಲಿ ಲಾರಿವೊಂದರಲ್ಲಿ ಬಂದ ಚಾಲಕನೊಬ್ಬ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿರುವ ಫ್ರೆಂಡ್ಸ್ ಗ್ಯಾರೇಜ್ ನ ಬಳಿ ಲಾರಿಯನ್ನು ಪಾರ್ಕ್ ಮಾಡಿ ಗ್ಯಾರೇಜ್ ನಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ಎರಡು ಘನ ವಾಹನದ ಬಿಡಿಭಾಗಗಳನ್ನು ಕಳವು ಮಾಡಿಕೊಂಡು ಈ ಬಗ್ಗೆ ಗ್ಯಾರೇಜ್ ಮಾಲೀಕರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೆತ್ತಿಗೊಂಡ ಸುರತ್ಕಲ್ ಪೊಲೀಸರು, ಪ್ರಕರಣದಲ್ಲಿ ಭಾಗಿಯಾದ ಲಾರಿ ಚಾಲಕ ಮುಖೇಶ್ ದಾಸ್, ಶ್ರೀನಿವಾಸ ನಗರ, ಬನಶಂಕರಿ, ಬೆಂಗಳೂರು. ಖಾಯಂ ವಾಸ: ಜೋದ್ ಪುರ್, ರಾಜಸ್ಥಾನ ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ ಕಳವುಗೈದ 96,000 ಸಾವಿರ ರೂ. ಮೌಲ್ಯದ ವಾಹನಗಳ ಬಿಡಿಭಾಗಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ KA-02-AM-2335 ಈಚರ್ ಲಾರಿ ಸೇರಿದಂತೆ ಒಟ್ಟು ರೂ.15,96,000 ಮೌಲ್ಯದ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.