ಬಂಟ್ವಾಳ ಪೊಲೀಸರ ಕಾರ್ಯಾಚರಣೆ: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಕರಾವಳಿ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ರ: 90/2016ರ ಪ್ರಕರಣದಲ್ಲಿ ಸರಿ ಸುಮಾರು ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪ್ರಿನ್ಸ್ ಟಿ ಜೆ ಜೋಶ್, ಕುಟ್ಟಿಂಚಾಲ್ ಎರ್ನಾಕುಲಂ ಎಂಬಾತನನ್ನು ಬಂಟ್ವಾಳ ಪೊಲೀಸರು ದಿನಾಂಕ:13-03-2026 ರಂದು ಕೇರಳ ರಾಜ್ಯದ ಕುಟ್ಟಂಪುಝ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ACJ &JMFC ನ್ಯಾಯಾಲಯ ಬಂಟ್ವಾಳ ನ್ಯಾಯಾಧೀಶರ ಮುಂದೆ ಹಾಜರು‌ ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ ASP ಯಶ್ ಕುಮಾರ್ ಶರ್ಮಾ IPS ರವರ ನಿರ್ದೇಶನದಂತೆ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಟಿ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಸಂತೋಷ್, ಶಿವಾನಂದ ಮಡ್ಡಿ ರವರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.