ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ರೇಪ್; ಇಬ್ಬರು ಆರೋಪಿಗಳು ಅಂದರ್; ಹಸೆಮಣೆ ಏರಬೇಕಾಗಿದ್ದ ಯುವಕ ಸೆರೆಮನೆಗೆ.!

ಕರಾವಳಿ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಎರ್ಮಾಯಿ ಫಾಲ್ಸ್ ನ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಏಪ್ರಿಲ್ 16 ರಂದು ಘಟನೆ ನಡೆದಿದ್ದು, ಮರುದಿನ ಬಾಲಕಿಯ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ ಎಸ್, ಧರ್ಮಸ್ಥಳ ಠಾಣೆ ಸಬ್ ಇನ್ಸ್ ಪೆಕ್ಟರ್ ಸಮರ್ಥ ಆರ್ ಗಾಣಿಗ ನೇತೃತ್ವದ ತಂಡ ಬೆಳ್ತಂಗಡಿ ತಾಲೂಕಿನ ಕಡರುದ್ಯಾವರ ಗ್ರಾಮದ ಸುಮಂತ್ ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್ ಬಂಧಿತ ಆರೋಪಿ. ಅದರಲ್ಲೂ ಆರೋಪಿ ಸುಮಂತ್ ಗೆ ಮೇ 10 ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು. ಹಸೆಮಣೆ ಏರಬೇಕಾಗಿದ್ದ ಯುವಕ ಸೆರೆಮನೆ ಸೇರಿದ್ದಾನೆ.