ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಕಳೆದ 3 ವರ್ಷಗಳಲ್ಲಿ 23 ವಿದ್ಯಾರ್ಥಿಗಳು ವಿವಿಧ ಕಾರಣಗಳಿಗಾಗಿ ಮೃತಪಟ್ಟಿದ್ದಾರೆ. ಇದಲ್ಲದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ 21 ವಿದ್ಯಾರ್ಥಿಗಳು ಮೃತರಾಗಿದ್ದಾರೆ. ಇದು ವಿದ್ಯಾರ್ಥಿಗಳ ಪೋಷಕರಲ್ಲಿ ಸಹಜವಾಗಿಯೇ ಆತಂಕ ಮೂಡಿಸಿದೆ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿನ ಹಲವಾರು ವಸತಿ ಶಾಲೆ -ಕಾಲೇಜುಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾರೆ. ಸರ್ಕಾರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ದಾಖಲಾತಿ ಹೊಂದಿರುವ ವಸತಿ ನಿಲಯಗಳಿಗೆ ಸ್ವಯಂ ರಕ್ಷಿಸಿಕೊಳ್ಳಲು ಆತ್ಮಸ್ಥೈರ್ಯ ವನ್ನು ಹೆಚ್ಚಿಸುವ ಸಲುವಾಗಿ ಕರಾಟೆ, ಜೋಡೋ, ಟೆಕ್ಯಾಂಡೋ ತರಬೇತಿಯನ್ನು ನೀಡುತ್ತದೆ. ಆದರೂ ಇಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಅಸಹಜ ಸಾವು ಆತಂಕ ಮೂಡಿಸಿದ್ದಂತೂ ಸುಳ್ಳಲ್ಲ.
ಇಲಾಖೆಯ ವಿದ್ಯಾರ್ಥಿ ನಿಲಯಗಳ ವಸತಿ ಶಾಲೆಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರದೇಶಕ್ಕೆ ನಿರ್ಬಂಧಿಸಿ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾಗಿರುವ ನಿಲಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಲೈಂಗಿಕ ದೌರ್ಜನ್ಯದಂತಹ ಗುಡ್ ಆಂಡ್ ಬ್ಯಾಡ್ ಟಚ್ ಹಾಗೂ ಪೋಕ್ಸೋ ಕಾಯ್ದೆಯ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಸಮಾಲೋಚನಾ ಕೇಂದ್ರಗಳನ್ನು ಆರಂಭಿಸಿರುವ ಬಗ್ಗೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಈ ವಿವಿಧ ಕಾರಣಗಳಿಗಾಗಿ ಕ್ರೈಸ್ ವ್ಯಾಪ್ತಿಯಲ್ಲಿ ನಿರ್ವಹಿಸುತ್ತಿರುವ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಕೋಲಾರ ಜಿಲ್ಲೆಗಳಲ್ಲಿ ಮೂರು ವರ್ಷಗಳಲ್ಲಿ ನಾಲ್ಕು ವಿದ್ಯಾರ್ಥಿ, ರಾಯಚೂರು ಹಾಗೂ ಚಿಕ್ಕಮಗಳೂರು ತಲಾ ಮೂರು, ಬೀದರ್ ಹಾಗೂ ಬೆಳಗಾವಿ ತಲಾ 2 ವಿದ್ಯಾರ್ಥಿಗಳು ಇದ್ದಾರೆ. ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಕಲಬುರ್ಗಿ, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ತಲಾ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಅಲ್ಲದೆ ವಿವಿಧ ಕಾರಣಗಳಿಗಾಗಿ ಮೃತರಾದ ವಿದ್ಯಾರ್ಥಿಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರು ಹಾಗೂ ಬೀದರ್, ಕಲಬುರ್ಗಿ, ರಾಯಚೂರು ಹಾಗೂ ತುಮಕೂರಿನಲ್ಲಿ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ಮೂರು ವರ್ಷಗಳಲ್ಲಿ ವಸತಿ ನಿಲಯಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 6 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಪ್ರಕರಣಗಳು ಅಂತಿಮ ಆದೇಶ ಹೊರಡಿಸಲು ಬಾಕಿ ಇವೆ. 2 ಪ್ರಕರಣಗಳು ಇಲಾಖಾ ಹಿತದೃಷ್ಟಿಯಿಂದ ಕರ್ನಾಟಕ ಆತ್ಮಹತ್ಯೆ ತಡೆ ನೀತಿ -2025 ರ ಅಂತಿಮ ಹಂತದ ಪ್ರಕ್ರಿಯೆಯಲ್ಲಿರುತ್ತದೆ. ಆದಷ್ಟು ಶ್ರೀಘ್ರದಲ್ಲಿ ಈ ನೀತಿಯನ್ನು ಜಾರಿಗೆ ತರುತ್ತೇವೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ 6 ನೇ ತರಗತಿಯಿಂದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಿಸಿಕೊಳ್ಳಲು ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಿಸಿಕೊಳ್ಳಲು, 2021-22 ನೇ ಸಾಲಿನಿಂದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ.
ಇಲಾಖೆಯಲ್ಲಿನ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸಹಾಯವಾಣಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
