ಕುಖ್ಯಾತ ರೌಡಿ ಮನೋಜ್ ಕೋಡಿಕೆರೆ ಮತ್ತು ಚೇತು ಪಡೀಲ್ ಬಂಧನ.

ಕರಾವಳಿ

ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಮೊತ್ತವನ್ನು ಪೊಲೀಸ್ ಇಲಾಖೆಯಿಂದ ವಿತರಣೆ

ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೋಕಾ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಮೊತ್ತವನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ.

ಕೋಟ ಪೊಲೀಸ್ ಠಾಣೆಯಲ್ಲಿ ಕೋಕಾ ಕಾಯ್ದೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ ಹಾಗೂ ಚೇತನ್ @ ಚೇತು ಪಡೀಲ್ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಿದ್ದ ಪೊಲೀಸರು, ಮಾಹಿತಿ ನೀಡುವವರಿಗೆ 50,000 ನಗದು ಬಹುಮಾನ ಘೋಷಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದರು. ಸಾರ್ವಜನಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಆರೋಪಿ ಚೇತನ್ @ ಚೇತು ಪಡೀಲ್ ಹಾಗೂ ಮತ್ತೋರ್ವ ಆರೋಪಿ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಿಗಳಲ್ಲಿ ಮನೋಜ್ ಕೋಡಿಕೆರೆ ವಿರುದ್ಧ ಉಡುಪಿ ಜಿಲ್ಲೆಯಲ್ಲಿ 2 ಮತ್ತು ಮಂಗಳೂರು ನಗರದಲ್ಲಿ 17 ಪ್ರಕರಣಗಳು, ಒಟ್ಟು 19 ಪ್ರಕರಣ ಗಳು ದಾಖಲಾಗಿದ್ದು, 3 ಕೊಲೆ ಪ್ರಕರಣ, 5 ಕೊಲೆ ಪ್ರಯತ್ನ ಪ್ರಕರಣ, 1 ಅಪಹರಣ ಪ್ರಕರಣ, 10 ಹಲ್ಲೆ ಮತ್ತು ದೊಂಬಿ ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿ ಚೇತನ್ ವಿರುದ್ಧ ಉಡುಪಿ-2, ದಕ್ಷಿಣ ಕನ್ನಡ -2 ಮತ್ತು ಮಂಗಳೂರು ನಗರ-9 ಪ್ರಕರಣಗಳು ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿದ್ದು, 2 ಕೊಲೆ, 2 ಕೊಲೆ ಪ್ರಯತ್ನ ಪ್ರಕರಣ, 1 ಅಪಹರಣ ಪ್ರಕರಣ, 2 ಮಾದಕ ದ್ರವ್ಯ ಸೇವನೆ ಮತ್ತು 6 ಹಲ್ಲೆ ಮತ್ತು ದೊಂಬಿ ಪ್ರಕರಣಗಳು ದಾಖಲಾಗಿರುತ್ತದೆ.