ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಕಳ ನಿವಾಸಿ ಪ್ರಸಾದ್ ಬಂಧನ

ಕರಾವಳಿ

ಎಲ್.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಏರ್ಲಂಪಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅ.ಕ್ರ 289/2016 ಕಲಂ 379 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿ ಪ್ರಸಾದ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಪ್ರಕರಣವನ್ನು ಎಲ್.ಪಿ.ಸಿ ಪ್ರಕರಣವಾಗಿ ಪರಿವರ್ತಿಸಿತ್ತು. ಈತನ ವಿರುದ್ಧ ಹಿರಿಯಡ್ಕ, ಕೋಣಾಜೆ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಸಾದ್ ನನ್ನು ಜೂನ್ 24 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.