ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ; ಅಕ್ಷೇಪಾರ್ಹ ಕಮೆಂಟ್ಸ್, ಆರೋಪಿಯ ಬಂಧನ .

ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ:18-09-2025 ರಂದು ಅ.ಕ್ರ.ಸಂ:131/2025ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಬೆಂಗಳೂರು ವಿದ್ಯಮಾನ್ಯ ನಗರದ ನಿವಾಸಿ, ಆನಂದ.ಎ ಎಂಬಾತನನ್ನು ದಿನಾಂಕ: 27/06/2026 ರಂದು ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಆರೋಪಿ ಆನಂದ ಎಂಬಾತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿರುತ್ತದೆ.