ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ: ಖೋಟಾ ನೋಟು ಮುದ್ರಣ ಜಾಲ ಪತ್ತೆ. ಏಳು ಮಂದಿ ಆರೋಪಿಗಳ ಬಂಧನ; ಪ್ರಿಂಟಿಗ್ ಸಾಮಾಗ್ರಿ ವಶ

ಕರಾವಳಿ

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಭಾರತೀಯ ನಕಲಿ ನೋಟುಗಳನ್ನು ಮುದ್ರಿಸುತ್ತಿರುವ ಬಗ್ಗೆ, ಉಪ್ಪಿನಂಗಡಿ ಠಾಣಾ ಪೊಲೀಸರಿಗೆ ಬಂದ ಖಚಿತ ಮಾಹಿತಿ ಬಂದ ಮೇರೆಗೆ, ದಿನಾಂಕ: 16.07.2026 ರಂದು ಬೆಳಗ್ಗಿನ ಜಾವ ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿ, 500 ರೂ. ಮುಖಬೆಲೆಯ ನೋಟು, ಗಣಕಯಂತ್ರ, ಝರಾಕ್ಸ್ ಮೆಷಿನ್, ಸೀಲ್ ಗಳು ಸೇರಿದಂತೆ ಇತರ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026 ರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬಂಧಿತರನ್ನು ಇಬ್ರಾಹಿಂ, ಶರೀಪ, ಸಂದೀಪ ಪುಂಡಲಿಕ ಶೋಳಂಬಿ, ಮಹಮ್ಮದ್ ನಬಾಸ್, ಸಲ್ಮಾನ್ ಫಾರೀಸ್, ಸಿರಾಜುದ್ದೀನ್, ಇರ್ಷಾದ್ ಎಂದು ಗುರುತಿಸಲಾಗಿದೆ. ಪ್ರಕರಣ ಸ್ಥಳದಲ್ಲಿ 500 ರೂ. ಮುಖಬೆಲೆಯ ನೋಟು, 1,500 ರೂ ಮುಖ ಬೆಲೆಯ ನೋಟುಗಳಂತೆ ಕಾಣುವ A-4 ಸೈಜ್ ಹಾಳೆಗಳು-21 ಹಾಗೂ ಗಣಕಯಂತ್ರ, ಝರಾಕ್ಸ್ ಮೆಷಿನ್, ಸೀಲ್ ಗಳು ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.