ಪಿಎಪ್ಐ ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ, ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಪಿಎಫ್ ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಪಾಷ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ಅವರು ವಾದಿಸಿದ್ದರು.ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.ಸೂಕ್ತವಾದ ಕಾರಣ ನೀಡಿಯೇ ನಿಷೇಧಿಸಿರುವುದಾಗಿ ಕೋರ್ಟ್ ಗೆ ಹೇಳಿತ್ತು.
