ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: ಮಹಾರಾಷ್ಟ್ರ ಮೂಲದ ಮನೆ ಕಳ್ಳತನ ಆರೋಪಿಯ ಬಂಧನ

ಕರಾವಳಿ

ಕಂಕನಾಡಿ: ಮಂಗಳೂರು ಜೆಪ್ಪಿಮೊಗರು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಮುರಿದು, ಕಪಾಟಿನಲ್ಲಿಟ್ಟಿರುವ 14 ಗ್ರಾಂ ತೂಕದ ಚಿನ್ನದ ಸರ, 2 ಗ್ರಾಂ ತೂಕದ 2 ಉಂಗುರ ಹಾಗೂ 25 ಸಾವಿರ ರೂ. ನಗದು ಹಣವನ್ನು ಕಳ್ಳತನ ಮಾಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 106/2026 ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿದಂತೆ ತನಿಖೆಗಿಳಿದ ವಿಶೇಷ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಿನಾಂಕ: 11-08-2026 ರಂದು ತಲಪಾಡಿಯ ಬಸ್ ಸ್ಟ್ಯಾಂಡ್ ಬಳಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಸಮಧನ ಸಕಹರಿ ನರಳೆ, ನರಳೆವಾಡಿ ಗ್ರಾಮ, ಸಾಂಗ್ಲಿ ಮಹಾರಾಷ್ಟ್ರ ಎಂಬಾತನನ್ನು ವಶಕ್ಕೆ ಪಡೆದು, ಪ್ರಕರಣದಲ್ಲಿ ಕಳವು ಮಾಡಿರುವ ಸೊತ್ತು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.