ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿ, ಅವರುಗಳಿಂದ ಸುಮಾರು 24 ಲಕ್ಷ ರೂ. ಮೌಲ್ಯದ 240 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.
ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ MDMA ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿನಾಂಕ 26-09-2026 ರಂದು ಸಂಜೆ ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ ಹಾಗೂ 4 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಟೆಂಪೋ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 29,80,000 ರೂ. ಆಗಿರುತ್ತದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತರನ್ನು ನವಾಜ್ @ ನವ್ವಾ@ ಮುಡಿಪು ನವಾಜ್, ಗೌಸಿಯಾ ಕಂಪೌಂಡು, ಕೈರಂಗಳ ಗ್ರಾಮ, ಮುಡಿಪು. ಮೊಹಮ್ಮದ್ ಆರೀಫ್ ಎನ್, ನಟ್ಟಿಹಿತ್ತಲು ಮನೆ, ಕೈರಂಗಳ ಪೊಸ್ಟ್, ಮುಡಿಪು. ಲಾಯ್ಡ್ ಡಿಸೊಜಾ, ಮತ್ತೆಬಾರೆ , ಕೈರಂಗಳ ಪೊಸ್ಟ್, ಮುಡಿಪು ಎಂದು ಗುರುತಿಸಲಾಗಿದೆ.
ಆರೋಪಿ ನವಾಜ್ @ ನವ್ವಾ @ ಮುಡಿಪು ನವಾಜ್ ಎಂಬಾತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 16 ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 02 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ದಾಖಲಾಗಿವೆ. ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆ ಮತ್ತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣ ಸೇರಿದಂತೆ ಒಟ್ಟು 04 ಪ್ರಕರಣಗಳು ದಾಖಲಾಗಿರುತ್ತವೆ.
ಈ ಮಾದಕವಸ್ತು ಮಾರಾಟ, ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.
