ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ನಾಚಿಕೆಗೇಡಿನ ಘಟನೆಯೊಂದು ವರದಿಯಾಗಿದೆ.ಪ್ರವಾಸದಲ್ಲಿರುವ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿದ್ದಾರೆ.
ಮೀರತ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ಅವರದೇ ಶಾಲೆಯಲ್ಲಿ ಓದುತ್ತಿರುವ 11ನೇ ತರಗತಿಯ ವಿದ್ಯಾರ್ಥಿಯೊಬ್ಬರು ದೂರು ದಾಖಲಿಸಿದ್ದಾರೆ.
ನವೆಂಬರ್ 23ರಂದು ಪ್ರಾಂಶುಪಾಲರು ಶಾಲೆಯ ಒಂಬತ್ತು ವಿದ್ಯಾರ್ಥಿಗಳನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು. ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು. ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿಗಳು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿ ವಿದ್ಯಾರ್ಥಿನಿ 17 ವರ್ಷದ ಬಾಲಕಿ ಉಳಿದುಕೊಂಡಿದ್ದರು ಎನ್ನಲಾಗಿದೆ.
ಈ ವೇಳೆ ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವ ಬೆದರಿಕೆ ಹಾಕಿದ್ದು ಅಲ್ಲದೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
