ಸುರತ್ಕಲ್‌ನಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ; ಕಾಟಿಪಳ್ಳ ನಿವಾಸಿಯ ಇರಿದು ಕೊಲೆ

ಕರಾವಳಿ

ಶಾಂತವಾಗಿದ್ದ ಸುರತ್ಕಲ್‌ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.ಯುವಕನೊಬ್ಬನಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಇಂದು ಸಂಜೆ ಸುರತ್ಕಲ್ ಸಮೀಪದ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ.

ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪ್ಯಾನ್ಸಿ ಅಂಗಡಿಯ ಮಾಲಕ ಜಲೀಲ್ ಅಂಗಡಿ ಮುಂದೆ ನಿಂತಿದ್ದ ಸಮಯದಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಚೂರಿ ಇರಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್ ರವರು ಅಸುನೀಗಿದ್ದಾರೆ.