ಇತ್ತೀಚೆಗೆ ಮಂಗಳೂರಿನ ಸುಮಾ ಸಧನದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಶ್ರೀ ಜಾಕೆ ಮಾಧವಗೌಡರ ಸಮ್ಮುಖದಲ್ಲಿ ಮುಹಮ್ಮದ್ ಅಲ್ತಾಫ್ ತುಂಬೆ ರವರನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬಹುಮತದಿಂದ ನೇಮಕ ಮಾಡಲಾಯಿತು.
ಅಲ್ತಾಫ್ ತುಂಬೆರವರು ಮಂಗಳೂರು ದಕ್ಷಿಣ ಕ್ಷೇತ್ರ ಜನತಾದಳದ ಕಾರ್ಯಚಟುವಟಕೆ ಹಾಗೂ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿ,ದಕ್ಷಿಣದ ಕ್ಷೇತ್ರದ ಅಭ್ಯರ್ಥಿ ಡಾ.ಸುಮತಿ ಎಸ್ ಹೆಗ್ಡೆ ಯವರ ಆಪ್ತ ಸಹಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದು , ಕ್ಷೇತ್ರದಾದ್ಯಂತ ಸಂಚರಿಸಿ ಪಕ್ಷ ಕಟ್ಟುವಲ್ಲಿ ಯಶಸ್ವಿಯಾಗಿ,ಇದೀಗ ಮಂಗಳೂರು ದಕ್ಷಿಣ ಕ್ಷೇತ್ರದ ಪ್ರ.ಕಾರ್ಯದರ್ಶಿಯಾಗಿ ಆಯ್ಕೆ ಯಾಗಿದ್ದಾರೆ.
ಅಲ್ತಾಫ್ ತುಂಬೆರವರು ಹಲವಾರು ಜನಪರ ಹೋರಾಟಗಳಲ್ಲಿ ಭಾಗವಹಿಸಿ,ಸಾರ್ವಜನಿಕವಾಗಿ ಗುರುತಿಸಿಕೊಂಡಿರುತ್ತಾರೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಕೆಲಸ ಕಾರ್ಯಗಳಲ್ಲಿ ಸಕ್ರಿಯರಾಗಿ ಉದಯೋನ್ಮುಖವಾಗಿ ಬೆಳೆಯಲಿ ಎಂದು ಆಶಿಸೋಣ.
