ಸುರತ್ಕಲ್‌ನಲ್ಲಿ ಕೊಲೆಯಾಗಿದ್ದ ಫಾಝಿಲ್ ಅವರ ಸಹೋದರನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ನಡೆದಿದೆ.ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಈ ವೇಳೆ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಆಗಮಿಸಿದ ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
