ಮಂಗಳೂರು:ಚಿನ್ನದ ಅಂಗಡಿಗೆ ನುಗ್ಗಿ ಸಿಬ್ಬಂದಿ ಹತ್ಯೆ ಆರೋಪಿಯ ಬಂಧನ.

ಕರಾವಳಿ

ಕಾಸರಗೋಡಿನ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಕೇರಳ ಪೊಲೀಸರು ವಶಕ್ಕೆ

ಮಂಗಳೂರಿನ ಮಿಲಾಗ್ರಿಸ್ ಬಳಿಯ ಚಿನ್ನದ ಅಂಗಡಿಗೆ ನುಗ್ಗಿ ಸಿಬ್ಬಂದಿ ಹತ್ಯೆ ಪ್ರಕರಣದ ಆರೋಪಿಯನ್ನು ಕೇರಳದ ಕಾಸರಗೋಡಿನಲ್ಲಿ ಬಂಧಿಸಲಾಗಿದೆ.ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಎಂಬಾತನೇ ಬಂಧಿತ ಆರೋಪಿ.ಈತನನ್ನು ಕಾಸರಗೋಡಿನ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಸರಗೋಡು ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸರ ತಂಡದಿಂದ ಬಂಧಿಸಲಾಗಿದೆ.
ಸದ್ಯ ಆರೋಪಿ ಶಿಫಾಸ್ ನನ್ನು ಮಂಗಳೂರು ಪೊಲೀಸರಿಗೆ ಒಪ್ಪಿಸುವ ಪ್ರಕ್ರಿಯೆ ನಡೆದಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಆರೋಪಿ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದ್ದಾನೆ.ಫೆ.3ರಂದು ಮಂಗಳೂರಿನ ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಸಿಬ್ಬಂದಿಯ ಕೊಲೆ ನಡೆದಿದೆ.ಜ್ಯುವೆಲ್ಲರಿ ಸಿಬ್ಬಂದಿ, ಅತ್ತಾವರ ನಿವಾಸಿ ರಾಘವೇಂದ್ರ ಎಂಬವವರನ್ನು ಈತ ಹತ್ಯೆ ಮಾಡಿದ್ದಾನೆ.

ಚಿನ್ನದಂಗಡಿ ಮಾಲೀಕ ಕೇಶವ ಆಚಾರ್ಯರವರು ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಕೊಲೆ ನಡೆದಿದೆ ಎನ್ನಲಾಗಿದೆ.ಬಂದರು ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ದಿನವೇ ಜ್ಯುವೆಲ್ಲರಿಯಲ್ಲಿದ್ದ ಚಿನ್ನಾಭರಣ ಮಿಸ್ಸಿಂಗ್ ಆಗಿತ್ತು.ಇದೀಗ ಆರೋಪಿಯ ಬಂಧನವಾಗಿದೆ.