ಲಂಚ ಪ್ರಕರಣ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು

ರಾಜ್ಯ

ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಜಾಮೀನು ಸಿಕ್ಕಿದೆ. ನ್ಯಾಯಾಮುರ್ತಿ ನಟರಾಜನ್ ಅವರು ಮಾಡಳ್ ವಿರೂಪಾಕ್ಷಪ್ಪಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತ ಪೊಲೀಸರು ದಾಖಲೆ ಸಲ್ಲಿಸುವವರೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಧ್ಯಂತರ ಜಾಮೀನು ನೀಡಿದೆ. 5 ಲಕ್ಷ ಮೌಲ್ಯದ ಬಾಂಡ್​, ಇಬ್ಬರು ಶ್ಯೂರಿಟಿ ನೀಡುವಂತೆ ನ್ಯಾಯಮೂರ್ತಿ ಕೆ.ನಟರಾಜನ್​ ಆದೇಶಿಸಿದ್ದಾರೆ. ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಖಡಕ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದ್ದಾರೆ.

ಕಳೆದ ಆರು ದಿನಗಳಿಂದ ಅಜ್ಞಾತ ಸ್ಥಳದಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ ಪರ ಹಿರಿಯ ವಕೀಲ ಕೆ.ಸುಮನ್ ವಾದ ಮಂಡಿಸಿದ್ದು, ಎಫ್ಐಆರ್​ನಲ್ಲಿ ಯಾವುದೇ ಆರೋಪಗಳಿಲ್ಲ. ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಟೆಂಡರ್ ಹಾಗೂ ಖರೀದಿ ಆದೇಶ ನೀಡಲಾಗಿದೆ. ಆದ್ರೆ, ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪನವರದ್ದಲ್ಲ. ಲಂಚಕ್ಕೆ ಯಾವುದೇ ಬೇಡಿಕೆ ಇಟ್ಟ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಮಗನೊಂದಿಗೆ ಮಾತನಾಡುವಂತೆ ತಿಳಿಸಿರುವುದಾಗಿ ಆರೋಪಿಸಲಾಗಿದೆ. ಆದರೆ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಆರೋಪವಿಲ್ಲ. ಹೀಗಾಗಿ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು