ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯ ರಹಸ್ಯ! ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ,ಇಂದು ಬಿಡುಗಡೆ

ರಾಜ್ಯ

ಕರ್ನಾಟಕ ಕಾಂಗ್ರೆಸ್‌ ಪಕ್ಷ ಚುನಾವಣೆ ಎದುರಿಸಲು ಸಕಲ ಸಿದ್ಧತೆಗಳನ್ನು ತುಂಬಾ ವೇಗವಾಗಿ ಮಾಡಿಕೊಳ್ಳುತ್ತಿದೆ.ಈಗ ಮೊದಲ ಪಟ್ಟಿಯೂ ರೆಡಿಯಾಗಿದೆ. ಇದರಲ್ಲಿ ಸಂಭಾವ್ಯ ಅಭ್ಯರ್ಥಿಗಳು ಯಾರೆಲ್ಲಾ ಎನ್ನುವ ಕುತೂಹಲ ಹುಟ್ಟುಕೊಂಡಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಕೇಂದ್ರ ಚುನಾವಣಾ ಆಯೋಗ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆಯ ದಿನಾಂಕವನ್ನು ಪ್ರಕಟ ಮಾಡಲಿದೆ. ಈ ನಡುವೆ ರಾಜ್ಯ ಕಾಂಗ್ರೆಸ್‌ ಚುನಾವಣೆಯ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸನಿಹದಲ್ಲಿದೆ. ಶುಕ್ರವಾರ ಕಾಂಗ್ರೆಸ್‌ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಯಾರಿಗೆಲ್ಲಾ ಟಿಕೆಟ್‌ ಸಿಗಲಿದೆ ಎನ್ನುವ ಕುತೂಹಲ ಹುಟ್ಟಿಕೊಂಡಿದೆ.

ಮೂಲಗಳ ಪ್ರಕಾರ, ಕಳೆದ ಬಾರಿ ಕಾಂಗ್ರೆಸ್‌ ಪಕ್ಷ ಸೋತ ಕ್ಷೇತ್ರಗಳಲ್ಲಿ ಟಿಕೆಟ್‌ ಫೈನಲ್‌ ಮಾಡಿ ಮೊದಲ ಲಿಸ್ಟ್‌ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಟಿಕೆಟ್‌ ಪ್ರಕಟಗೊಂಡ ಬಳಿಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಸುತ್ತಿನ ಅಸಮಾಧಾನ ಹೊಗೆಯಾಡಬಹುದು ಎಂದೂ ಹೇಳಲಾಗಿದೆ.