ಮುತಾಲಿಕರೇ.. ದುಡ್ಡಿಗಾಗಿ ಉತ್ತರ ಕರ್ನಾಟಕದಲ್ಲಿ ಟೈಗರ್ ಗ್ಯಾಂಗಿನ ನೆಪದಲ್ಲಿ ಎಷ್ಟು ಹಿಂದೂಗಳ ಹತ್ಯೆ ಮಾಡಿದ್ದೀರಿ? ಎಂದಿದ್ದ ಸುನೀಲ್ ಕುಮಾರ್!

ಸುನಿಲ್ ಕುಮಾರ್ ವಿರುದ್ದದ ವಾರೆಂಟ್ ಗೆ ಹೈಕೋರ್ಟ್ ತಡೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಕುಮಾರ್ ಸ್ಪರ್ಧಿಸಿದ್ದರು. ಇವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು. ಆದರೆ ಮುತಾಲಿಕ್ ಸ್ಪರ್ಧೆಯಿಂದ ಸುನೀಲ್ ಕುಮಾರ್ ಗೆಲುವಿನ ಅಂತರ ಕಡಿಮೆಯಾಗಿತ್ತು. ಚುನಾವಣಾ ಫಲಿತಾಂಶದ ನಂತರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮೇ 14 ರಂದು ಕಾರ್ಕಳ ಬಂಡಿಮಠ ಬಸ್ ನಿಲ್ದಾಣದ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸುನೀಲ್ ಕುಮಾರ್, […]

Continue Reading

ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು (MDMA) ಸಾಗಿಸುತ್ತಿದ್ದ ಆಟೋ ಚಾಲಕ ಸಹಿತ ಮೂವರ ಬಂಧನ.

ಉಪ್ಪಿನಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಅದೇ ರಸ್ತೆಯಲ್ಲಿ ಬಂದ ಕೆಎ-21-ಸಿ-3003 ನೇ ನೋಂದಣಿ ಸಂಖ್ಯೆಯ ಅಟೋರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೇ ಮುಂದಕ್ಕೆ ಚಲಾಯಿಸಿ, ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಚಾಲಕ ಮತ್ತು ಹಿಂದಿನ ಸೀಟಿನಲ್ಲಿದ್ದ ವ್ಯಕ್ತಿಯು ವಾಹನದಿಂದ ಇಳಿದು ಓಡಲು ಪ್ರಯತ್ನಿಸಿರುತ್ತಾರೆ. ಸದ್ರಿ ಆರೋಪಿಗಳನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಸಮರ್ಪಕವಾದ ಉತ್ತರ […]

Continue Reading

ಭೂ ಸ್ವಾಧೀನದ ಹೆಸರಲ್ಲಿ ನೂರಾರು ಕೋಟಿ ರೂಪಾಯಿಗಳ ಅಕ್ರಮ ವರ್ಗಾವಣೆ ಆರೋಪ; ಇಡಿ ಅಧಿಕಾರಿಗಳಿಂದ ದಾಳಿ

ಭೂ ಸ್ವಾಧೀನದ ಹೆಸರಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಅಧಿಕಾರಿಗಳು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ನವಲೂರು ಬಳಿ ಇರುವ KIADB (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) ಕಚೇರಿ ಹಾಗೂ ಬೆಂಗಳೂರು ಕಚೇರಿ ಮೇಲೆ ಇಂದು ED (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ರೇಡ್​ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ನಡೆದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು, KIADB ಖಾತೆಯಿಂದ […]

Continue Reading

ಪುತ್ತೂರು: ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ನೇಮಕ

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ನೌಕರರ ಸಂಘಟನೆ, ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ, ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ, ಕರ್ನಾಟಕ […]

Continue Reading

ಬೀದಿಬದಿ ವ್ಯಾಪಾರಿಗಳ ಸಭೆ ನಡೆಸಿ, ಪರ್ಯಾಯ ವ್ಯವಸ್ಥೆ ಮತ್ತು ಐಡಿ ಕಾರ್ಡ್ ವಿತರಣೆಗೆ ಆಗಸ್ಟ್ 19 ವರೆಗೆ ಕಾಲಾವಕಾಶ ಕೋರಿದ ಮೇಯರ್ ಸುಧೀರ್ ಶೆಟ್ಟಿ

ಬೀದಿಬದಿ ವ್ಯಾಪಾರಿಗಳ ಮೇಲೆ ಕಳೆದ 10 ದಿನಗಳಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಇದರಿಂದಾಗಿ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಪಾಲಿಕೆಯ ಟೈಗರ್ ಕಾರ್ಯಾಚರಣೆ ವಿರುದ್ಧ ತೀವ್ರ ಪ್ರತಿರೋಧವನ್ನು ದಾಖಲಿಸುತ್ತಾ ಬಂದಿದೆ. ಆಗಸ್ಟ್ 7ರಂದು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಮೇಯರ್ ಮತ್ತು ಪಾಲಿಕೆಯ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದ್ದರು ಈ ಹಿನ್ನೆಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಬೀದಿಬದಿ ವ್ಯಾಪಾರಿಗಳ ಸಭೆ ನಡೆಸಿದ್ದಾರೆ. 667 […]

Continue Reading

ಹಿಜಾಬ್ ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜುವೊಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ

ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜುವೊಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಹಿಜಾಬ್ ಅನ್ನು ನಿಷೇಧಿಸಿದರೆ ಮಹಿಳಾ ಸಬಲೀಕರಣವನ್ನು ಹೇಗೆ ಸಾಧಿಸಬಹುದು ಎಂದು ನ್ಯಾಯಾಲಯವು ಕಾಲೇಜು ಆಡಳಿತವನ್ನು ಕೇಳಿದೆ.​ ಇದರೊಂದಿಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಈ ಪ್ರಕರಣಕ್ಕೆ ಬಾಂಬೆ ಹೈಕೋರ್ಟ್ ತೀರ್ಪಿಗೆ ಸಹ ಸುಪ್ರೀಂ ಕೋರ್ಟ್ ತಡೆ ನೀಡಿದಂತಾಗಿದೆ. ಕಾಲೇಜು ಆಡಳಿತ ಮಂಡಳಿಯ ವರ್ತನೆಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯಾವುದನ್ನು ಧರಿಸಬಹುದು? […]

Continue Reading

ಸಂಡೂರಿನ 550 ಎಕ್ರೆ ಗಣಿ ಭೂಮಿ ಪ್ರಕರಣ; ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್‌) ಮಂಜೂರಾತಿ ಕೋರಿ ಲೋಕಾಯುಕ್ತ 2023ರಲ್ಲಿ ರಾಜ್ಯಪಾಲರಿಗೆ ಪತ್ರ

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಕಾನೂನುಬಾಹಿರವಾಗಿ ವಿನೋದ್‌ ಗೋಯಲ್‌ ಎಂಬವರಿಗೆ ಮಂಜೂರು ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಬೃಹತ್‌ ಉದ್ದಿಮೆ ಮತ್ತು ಉಕ್ಕು ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಅಭಿಯೋಜನಾ (ಪ್ರಾಸಿಕ್ಯೂಷನ್‌) ಮಂಜೂರಾತಿ ಕೋರಿ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿದ್ದಾರೆ. 2006ರಲ್ಲಿ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್‌ […]

Continue Reading

ಸುಲಿಗೆ, ಭ್ರಷ್ಟಾಚಾರ ವಿರೋಧಿಸಿ ಮುಷ್ಕರಕ್ಕೆ ಮುಂದಾದ ಖಾಸಗಿ ಶಾಲೆಗಳು; ಸರಕಾರಕ್ಕೆ 15 ದಿನಗಳ ಗಡುವು

ಶಾಲಾ ಶಿಕ್ಷಣ ಇಲಾಖೆಯ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಾಗುತ್ತಿರುವ ಅನ್ಯಾಯ ವಿರೋಧಿಸಿ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ (ರುಪ್ಸಾ) ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ. ತಮ್ಮ ವಿವಿಧ ಬೇಡಿಕೆಗಳನ್ನು ಸರಕಾರ 15 ದಿನಗಳಲ್ಲಿ ಈಡೇರಿಸಬೇಕು. ಇಲ್ಲವಾದರೆ ಅಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟಿಸುವುದಾಗಿ ರುಪ್ಸಾ ಅಧ್ಯಕ್ಷ ಲೇಪಾಕ್ಷಿ ಹಾಲನೂರು ತಿಳಿಸಿದ್ದಾರೆ. ಶಾಲೆಗಳ ನವೀಕರಣಕ್ಕೆ ಇಲಾಖೆ 64 ಅಂಶಗಳನ್ನು ನಿಗಡಿಪಡಿಸಿ ದಾಖಲೆ ಪಡೆಯುತ್ತಿದೆ. […]

Continue Reading

ದರೋಡೆ ಪ್ರಕರಣ: ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಿದ ಸೋಮವಾರಪೇಟೆ ಪೊಲೀಸರು

ವಿಟ್ಲ: ಕೊಡಗು ಜಿಲ್ಲೆಯ ಸೋಮವಾರಪೇಟೆ ವ್ಯಾಪ್ತಿಯ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಏಳು ಆರೋಪಿಗಳನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ವಿಟ್ಲ ಪಡ್ನೂರು ಗ್ರಾಮದ ಕೆ.ಗಣೇಶ(28), ವೀರಕಂಬ ಗ್ರಾಮದ ಕುಸುಮಾಧರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ […]

Continue Reading

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ

ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರದ ಸದ್ದು ಈ ಹಿಂದೆ ಕೇಳಿಬಂದಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. ಆದರೀಗ ವಿಚಾರಣ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಮತ್ತೋರ್ವ ಆರೋಪಿ ಅಶೋಕ್ ಕುಮಾರ್ ಅವರು ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಪ್ರಕಟಿಸದಂತೆ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು ಆರೋಪಿಯಾಗಿರುವ […]

Continue Reading