ಮೂಡಾ, ವಾಲ್ಮೀಕಿ ಕರ್ಮಕಾಂಡದ ಬೆನ್ನಲ್ಲೇ ‘ನರ್ಸಿಂಗ್’ ಕರ್ಮಕಾಂಡ; ಪ್ರಭಾವಿಗಳ ಹೆಸರು ಥಳುಕು

ಪ್ರಧಾನಿ, ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ ಸೋನಿಯಾ. ರಾಜೀವ್ ಗಾಂಧಿ ವಿವಿ ಸಿಂಡಿಕೇಟ್ ಸದಸ್ಯರಾಗಲು ಲಕ್ಷಾಂತರ ರೂ ಲಂಚ .! ಬೆಂಗಳೂರು (ನವದೆಹಲಿ): ಮೂಡಾ ಅಕ್ರಮ, ವಾಲ್ಮಿಕಿ ನಿಗಮದ ಕರ್ಮಕಾಂಡಗಳು ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವಾಗಲೇ ಇದೀಗ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ (RGUHS) ವ್ಯಾಪ್ತಿಯಲ್ಲೂ ಭಾರೀ ಅಕ್ರಮ ನಡೆದಿದೆಯೆಂದು ಪ್ರಭಾವಿಗಳ ಹೆಸರು ಉಲ್ಲೇಖಿಸಿ ದೂರು ನೀಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಸದಸ್ಯರಾಗಲು ಲಕ್ಷಾಂತರ ರೂಪಾಯಿ ಡೀಲ್ ಕುದುರಿಸಬೇಕಿದ್ದು, ಆ ಹಣ ವಸೂಲಿಗಾಗಿ […]

Continue Reading

ಮಂಗಳೂರು: ಪಾಲಿಕೆ ಕಟ್ಟಡ ನಿಯಮಾವಳಿಯಲ್ಲಿ ಮಹತ್ವದ ಬದಲಾವಣೆಗೆ “ಬಿಲ್ಡಿಂಗ್‌ ಬೈಲಾ’ದ ಸಿದ್ದತೆ

ಮಂಗಳೂರು ಮಹಾನಗರ ಪಾಲಿಕೆ ಕಟ್ಟಡ ನಿಯಮಾವಳಿಯಲ್ಲಿ ಮಹತ್ವದ ಬದಲಾವಣೆ ತರುವ “ಬಿಲ್ಡಿಂಗ್‌ ಬೈಲಾ’ದ ಉಪವಿಧಿಗಳ ಪರಿಷ್ಕೃತ ಅನುಮೋದನೆಗೆ ಸಿದ್ದತೆ ಅಂತಿಮಗೊಂಡಿದೆ. ಸರಕಾರದಿಂದ ಬಂದಿರುವ ಕರಡು ಉಪವಿಧಿಗಳನ್ನು ಪಾಲಿಕೆ ಪರಿಶೀಲಿಸಿ, ಅದನ್ನು ಸರಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯುವ ಮೂಲಕ ಪರಿಷ್ಕೃತ ಬೈಲಾ ಅನುಷ್ಠಾನವಾಗಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ “ಬಿಲ್ಡಿಂಗ್‌ ಬೈಲಾ’ ಅನುಷ್ಠಾನದಲ್ಲಿದೆ. ಆದರೆ, ಅದು ಹಳೆಯ ಕಾಲದ್ದಾಗಿರುವುದರಿಂದ ಈಗ ಕೆಲವೊಂದಿಷ್ಟು ಹೊಸತನ, ಜನಸ್ನೇಹಿ ನಿಯಮಗಳನ್ನು ಕಟ್ಟಡ ನಿರ್ಮಾಣ ಸಂದರ್ಭ ಪಾಲಿಸಬೇಕಾದ ಕಾರಣದಿಂದ ಹೊಸ ಉಪವಿಧಿಗಳ ಅನುಷ್ಠಾನಕ್ಕೆ ಸರಕಾರ ಈ […]

Continue Reading

ಸಂಚಾರ ನಿಯಮ ಉಲ್ಲಂಘನೆ ವಿರುದ್ದ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡಿದರೆ BSN 281 ಅಡಿಯಲ್ಲಿ, 184 IMV ಕಾಯ್ದೆಯಡಿ FIR ದಾಖಲು ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಇದರ ಜೊತೆಗೆ ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ […]

Continue Reading

ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರದ ಮಹತ್ವದ ಕ್ರಮ; 25 ಲಕ್ಷದವರೆಗೆ ದಂಡ, 3 ವರ್ಷ ಶಿಕ್ಷೆ.

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ರೂಪಾಯಿ 25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ […]

Continue Reading

ಉಡುಪಿ: ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ: ಕರವೇ. ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ

ವರದಿ: ಅನುಷಾ ಉಡುಪಿ ಕಾಪು: ಹಲವು ವಿಫಲ ಪ್ರಯತ್ನಗಳ ಬಳಿಕ ಇದೀಗ ಮತ್ತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಪಡುಬಿದ್ರಿಯ ಕಂಚಿನಡ್ಕ ಬಳಿ ಟೋಲ್ ಸಂಗ್ರಹಕ್ಕೆ ಆದೇಶ ನೀಡಿದ ಬಗ್ಗೆ ತಿಳಿದುಬಂದಿದ್ದು, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಸಿದ್ದಾರೆ. ಮಂಗಳವಾರ ಕಾಪು ಪ್ರೆಸ್ ಕ್ಲಬ್‌ನಲ್ಲಿ ಕ.ರ.ವೇ.(ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಕರೆದ ಸುದ್ದಿಗೋಷ್ಠಿಯಲ್ಲಿ ಅನ್ಸಾರ್ ಅಹಮದ್ […]

Continue Reading

ಟ್ಯಾಂಕರ್ ಡಿಕ್ಕಿ ಸ್ಕೂಟರ್ ಸವಾರ ವಿಕಲಚೇತನ ಮೃತ್ಯು. ಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದ ಭೀಕರ ಅಪಘಾತ.

ಪುತ್ತೂರು : ನಗರದ ಮಂಜಲಪಡ್ಪು ಎಂಬಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದು ವಿಕಲಚೇತನ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಡ್ಕಿದು ಗ್ರಾಮದ ಏಮಾಜೆ ನಿವಾಸಿ ಶಿವರಾಮ ನಾಯ್ಕ(50)ಮೃತಪಟ್ಟ ಸವಾರ. ಲಾರಿ ಚಾಲಕ ಸಂತೋಷ್‌ ಕುಮಾರ್ ಎಂಬವರು KA-05-MG-5926 ನೇ ನೋಂದಣಿ ನಂಬ್ರದ ಲಾರಿಯನ್ನು, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಪುತ್ತೂರು ಕಡೆಯಿಂದ ಕಬಕ ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಕಬಕ ಗ್ರಾಮದ ಮಂಜಲ್ಪಡ್ಪು ಮಂಗಳ ಸ್ಟೋರ್‌ ಮುಂಭಾಗದಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಪುತ್ತೂರು ಕಡೆಗೆ ಹೋಗುತ್ತಿದ್ದ […]

Continue Reading

ಗುರುಪುರ ಸೇತುವೆಯಲ್ಲಿ ಅನಾಥ ಸ್ಥಿತಿಯಲ್ಲಿ ಸ್ಕೂಟರ್, ಚಪ್ಪಲಿ ಪತ್ತೆ, ನದಿಗೆ ಹಾರಿರುವ ಶಂಕೆ.

ಮಂಗಳೂರು ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಗುರುಪುರದ ಪಾಲ್ಗುಣಿ ನದಿಯ ಸೇತುವೆಯಲ್ಲಿ ಅನಾಥ ಸ್ಥಿತಿಯಲ್ಲಿ ಇಲೆಕ್ಟ್ರಿಕ್ ಸ್ಕೂಟರ್ ಮತ್ತು ಒಂದು ಜೊತೆ ಚಪ್ಪಲಿ ಪತ್ತೆಯಾಗಿದೆ. ಸ್ಕೂಟರ್ ವಾರೀಸುದಾರರು ಇದ್ದಲ್ಲಿ ತಿಳಿಸುವಂತೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಮಧ್ಯೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಗ್ರಾಮದ ಪಡೀಲ್ ನಿವಾಸಿ ಗಣೇಶ್(48)ಎಂಬವರು 22ರ ರಾತ್ರಿ 8 ಗಂಟೆಯಿಂದ KA19 HM 4598 ಸಂಖ್ಯೆಯ ಸ್ಕೂಟರ್ ಜೊತೆ ನಾಪತ್ತೆಯಾದ ಬಗ್ಗೆ ಪತ್ನಿ ಅಶ್ವಿತಾ ಎಂಬವರು ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ. […]

Continue Reading

ಮನಪಾ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರಿಂದ ಪಾಲಿಕೆ ಕಚೇರಿಗೆ ಮುತ್ತಿಗೆ, ಬಂಧನ

ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ಭ್ರಷ್ಟ ಲೂಟಿಕೊರ ಆಯುಕ್ತರು ತೊಲಗಲೇಬೇಕೆಂದು ಸೇರಿದ್ದ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯರಾದ ಬಿ.ಕೆ ಇಮ್ತಿಯಾಜ್ ಮಾತನಾಡುತ್ತಾ, ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಸಹಿತ ಇತರೆ ಯೋಜನೆಯ ನೂರಾರೂ ಕೋಟಿ ಅನುದಾನವನ್ನು ನಗರದ ಅಭಿವೃದ್ಧಿಗೆ ಬಳಸುವ ಬದಲಾಗಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. […]

Continue Reading

ಸಾರ್ವಜನಿಕ ಸ್ಥಳದಲ್ಲಿ ತೂರಾಡುತ್ತಿದ್ದ ಡ್ರಗ್ಸ್ ವ್ಯಸನಿಗಳ ಹಿಡಿದು ಬಂಟ್ವಾಳ ಪೊಲೀಸರ ವಶಕ್ಕೆ ಒಪ್ಪಿಸಿದ ಸ್ಥಳೀಯರು

ಬಂಟ್ವಾಳ: ಠಾಣಾ ವ್ಯಾಪ್ತಿಯ ಕುಕ್ಕಾಜೆ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.ಕುಕ್ಕಾಜೆ ಪೇಟೆಯಲ್ಲಿ ಬೆಳ್ಳಂಬೆಳಗ್ಗೆಯೇ ನಂದಾವರ, ಲೊರೆಟ್ಟೊಪದವು ಮತ್ತು ಕುಕ್ಕಾಜೆಯ ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ […]

Continue Reading

ಅಪ್ರಾಪ್ತ ಬಾಲಕಿಯನ್ನು ರಕ್ಷಿತಾರಣ್ಯಕ್ಕೆ ಬೈಕಲ್ಲಿ ಕರೆತಂದ ಯುವಕ. ಜನ ಜಮಾಯಿಸುದನ್ನು ಕಂಡು ಬೈಕ್, ಬಟ್ಟೆ ಬರೆ ಅಲ್ಲೇ ಬಿಟ್ಟು ಅರೆನಗ್ನ ಸ್ಥಿತಿಯಲ್ಲಿ ಪರಾರಿ

ಡ್ರಗ್ಸ್, ನಶೆಯೇರಿಸುವ ಮಾತ್ರೆಗಳು, ಕಾಂಡೋಮ್ ಪತ್ತೆ ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ. ಆದರೆ ದಿನವಿಡೀ ರಕ್ಷಿತಾರಣ್ಯ ಪ್ರದೇಶದಲ್ಲಿ ರಾಜಾರೋಷವಾಗಿ ಮದ್ಯ, ಡ್ರಗ್ಸ್ ಸೇವಿಸುವ ಪುಂಡರು ಅನೈತಿಕ ಚಟುವಟಿಕೆ ನಡೆಸುತ್ತಾ ಜನ ಸಾಮಾನ್ಯರ ಪಾಲಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ರಕ್ಷಿತಾರಣ್ಯ ತಪ್ಪಲು ಪ್ರದೇಶದ ಕುಳಾಲು, ಕುದ್ರಿಯ, ಮಂಕುಡೆ, ಕೋಜಿಗುರಿ ಮತ್ತು […]

Continue Reading