ಮಂಗಳೂರು ನಿವಾಸಿಗಳಿಂದ ಚಿಕ್ಕಮಗಳೂರು ಬಿಂದಿಗೆ ಪೀಕ್ ರೆಸಾರ್ಟ್ ನಲ್ಲಿ ನಡೆದಿದ್ದ ಮದುವೆ, ಹೆಚ್ಚುವರಿ ಹಣ ಪಡೆದ ಆರೋಪ

ಬಡ್ಡಿ ಸಹಿತ ಮರುಪಾವತಿಸಲು ಗ್ರಾಹಕ ವೇದಿಕೆ ಆದೇಶ ರೆಸಾರ್ಟ್ ನಲ್ಲಿ ನಡೆದ ಮದುವೆ ಕಾರ್ಯಕ್ರಮದ ವೆಚ್ಚಕ್ಕಿಂತ ಹೆಚ್ಚುವರಿ ಹಣ ಪಡೆದ ಆರೋಪದಲ್ಲಿ ರೆಸಾರ್ಟ್ ಆಡಳಿತ ಮಂಡಳಿ ಆ ಮೊತ್ತವನ್ನು ಬಡ್ಡಿ ಸಮೇತ ಮರು ಪಾವತಿ ಮಾಡಬೇಕೆಂದು ಮಂಗಳೂರಿನ ಗ್ರಾಹಕ ವೇದಿಕೆ ಆದೇಶ ನೀಡಿದೆ. ಮಂಗಳೂರು ಕುಲಶೇಖರ ಕಲ್ಪನೆ ನಿವಾಸಿಗಳಾದ ಗಣೇಶ ಕೃಷ್ಣ ಮತ್ತು ಶೃಂಗ ಅವರ ವಿವಾಹ 2013 ರ ನವೆಂಬರ್ 27 ರಿಂದ 30 ರವರೆಗೆ ಚಿಕ್ಕಮಗಳೂರಿನ ಕರ್ಕ್ ನಳ್ಳಿ ಬಿಂದಿಗೆ ಗ್ರಾಮದ ಬಿಂದಿಗೆ ಪೀಕ್ […]

Continue Reading

ಮಂಗಳೂರು: ಮನೆಗಾಗಿ ಸಾಲ ಪಡೆದಿದ್ದ ಮಹಿಳೆ; ಮೂಲ ದಾಖಲೆ ಹಿಂದಿರುಗಿಸದ ಬ್ಯಾಂಕ್ ಗೆ 53.14 ಲಕ್ಷ ದಂಡ ವಿದಿಸಿದ ದ.ಕ ಜಿಲ್ಲಾ ಗ್ರಾಹಕರ ವೇದಿಕೆ

ಸಾಲಕ್ಕೆ ಭದ್ರತೆಯಾಗಿ ನೀಡಿದ ಮೂಲ ದಾಖಲೆ ಹಿಂದಿರುಗಿಸದ ಪ್ರಕರಣದಲ್ಲಿ ಬ್ಯಾಂಕ್ 53.14 ಲಕ್ಷ ರೂಪಾಯಿ ಪಾವತಿಸಬೇಕು ಎಂದು ದ.ಕ ಜಿಲ್ಲಾ ಗ್ರಾಹಕರ ವೇದಿಕೆ ಆದೇಶ ನೀಡಿದೆ. ಮಂಗಳೂರು ತಾಲೂಕು ಕೆಂಜಾರಿನ ಸುನೀತಾ ಲಕ್ಷ್ಮಣ್ ಪೂಜಾರಿ ಅವರು ಕಂಕನಾಡಿಯಲ್ಲಿರುವ ಐಡಿಬಿಐ ಬ್ಯಾಂಕ್ ನಿಂದ 12 ಲಕ್ಷ ರೂಪಾಯಿ ಗೃಹಸಾಲ ಪಡೆದಿದ್ದರು. ಸಾಲದ ಬಾಬ್ತು ತಮ್ಮ ಮನೆಯ ಎಲ್ಲ ಮೂಲ ದಾಖಲೆಗಳನ್ನು ಬ್ಯಾಂಕ್ ನಲ್ಲಿ ಜಮೆ ಮಾಡಿದ್ದರು. ಸಾಲದ ಮರುಪಾವತಿಯನ್ನು ನಿಗದಿತ ಅವಧಿಯ ಮುಂಚಿತವಾಗಿಯೇ ಮರುಪಾವತಿ ಮಾಡಿದ‌ ನೆಲೆಯಲ್ಲಿ ತನ್ನ […]

Continue Reading

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ನಂಬಿಸಿ, ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಪ್ರಕರಣದ ಕಿಂಗ್ ಪಿನ್ ಬಂಧನ

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರೂ ಎಂಬಿಬಿಎಸ್ ಅಧ್ಯಯನಕ್ಕೆ ಸರಕಾರಿ ಸೀಟು ಕೊಡಿಸುವುದಾಗಿ ವಿವಿಧ ರಾಜ್ಯಗಳ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಪ್ರಕರಣವನ್ನು ಭೇದಿಸಿದ ಬೆಳಗಾವಿ ನಗರ ಪೊಲೀಸರು ಪ್ರಕರಣದ ಕಿಂಗ್ ಪಿನ್, ತೆಲಂಗಾಣ ಮೂಲದ ಅರಗೊಂಡ ಅರವಿಂದ ಅಲಿಯಾಸ್‌ ಅರುಣಕುಮಾರ್ ಅರಗೊಂಡ ಪ್ರಕಾಶಂ ಎಂಬಾತನನ್ನು ಮುಂಬೈಯಲ್ಲಿ ಬಂಧಿಸಿದ್ದಾರೆ. ಆರೋಪಿಯಿಂದ 12 ಲಕ್ಷ ರೂ,5 ಮೊಬೈಲ್, 15 ಸಿಪಿಯು ಮಾನಿಟರ್, 1 ಲ್ಯಾಪ್‌ಟಾಪ್, ತಲಾ ಮೂರು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್, 12 ಅಡಾಪ್ಟರ್, 1 ಬಯೋಮೆಟ್ರಿಕ್ ಹಾಗೂ 1 […]

Continue Reading

ಐದು ವರ್ಷಗಳ ಕಾಲ ಒಂದೇ ಸ್ಥಳದಲ್ಲಿ ಸೇವೆ ಪೂರೈಸಿರುವ ಪಿ.ಸಿ, ಎ.ಎಸ್ ಐ ವರೆಗಿನ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪೊಲೀಸ್ ಮಹಾ ನಿರ್ದೇಶಕರ ಆದೇಶ.

ಐದು ವರ್ಷಗಳ ಕಾಲ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಹಿಡಿದು ಸಹಾಯಕ ಸಬ್ ಇನ್‌ಸ್ಪೆಕ್ಟರ್‌ವರೆಗೂ ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಇತ್ತೀಚೆಗೆ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಸೂಚನೆಯ ಅನ್ವಯ ತಮ್ಮ ಘಟಕಗಳಲ್ಲಿ ಒಂದೇ ಸ್ಥಳ ಅಥವಾ ಠಾಣೆಗಳಲ್ಲಿ ಐದು ವರ್ಷ ಕರ್ತವ್ಯ ನಿರ್ವಹಿಸಿರುವ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯಿಂದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಯವರೆಗಿನ ಅಧಿಕಾರಿ, ಸಿಬ್ಬಂದಿಯನ್ನು ಕೂಡಲೇ ಬೇರೆ ಠಾಣೆ ಅಥವಾ […]

Continue Reading

ಜನಪ್ರತಿನಿಧಿಗಳ ಬೆಂಬಲದ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಿಗೆ ಸರಕಾರಿ ಕಾಲೇಜುಗಳನ್ನು ಬಲಿಯಾಗಿಸಲಾಗುತ್ತಿದೆ: ಮುನೀರ್ ಕಾಟಿಪಳ್ಳ.

ಬಡವರ ಮನೆಯ ಮಕ್ಕಳು ಪದವಿ ಶಿಕ್ಷಣ ಪಡೆಯಬೇಕಾದರೆ ಸರಕಾರಿ ಶಾಲಾ, ಕಾಲೇಜುಗಳು ಉಳಿಯಬೇಕು ಬಡವರ ಮನೆಯ ಮಕ್ಕಳು ತಮ್ಮ ಆಯ್ಕೆಯ ಪದವಿ ಶಿಕ್ಷಣ ಪಡೆಯಬೇಕಾದರೆ ಸರಕಾರಿ ಶಾಲಾ, ಕಾಲೇಜುಗಳು ಉಳಿಯಬೇಕು, ಬಲಗೊಳ್ಳಬೇಕು. ಹಣಕಾಸು, ಅನುದಾನದ ಕೊರತೆಯನ್ನು ಮುಂದಿಟ್ಟು ಕೊಣಾಜೆ, ಬನ್ನಡ್ಕ, ನೆಲ್ಯಾಡಿ ಸಹಿತ ನಾಲ್ಕು ಕಾಲೇಜು ಮುಚ್ಚಲು ಹೊರಟಿರುವುದು ನೆಪ ಮಾತ್ರ. ವಿವಿ ಆಡಳಿತದ ನಡೆಯನ್ನು ನಾಗರೀಕ ಸಮಾಜ ತೀವ್ರವಾಗಿ ವಿರೋಧಿಸಿದೆ. ವಿ.ವಿಯಲ್ಲಿ ಆರ್ಥಿಕ ಮುಗ್ಗಟ್ಟ ಅದಕ್ಕೆ ವಿ.ವಿ ಅಡಳಿತದ ಭ್ರಷ್ಟಾಚಾರ, ಇದನ್ನೆಲ್ಲ ಕಂಡು ಕಣ್ಣು ಮುಚ್ಚಿ […]

Continue Reading

ವಕೀಲರು ಸಮಾಜಮುಖಿ ವೃತ್ತಿ ಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದ್ರೇಶ್

ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ‌ನ್ಯಾಯಮೂರ್ತಿ ಇ.ಎಸ್.ಇಂದ್ರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್‌ಗಳು ಲಾ ಮೇಕರ್ ಮತ್ತು ಜನಸಾಮಾನ್ಯರ ನಡುವೆ ರಾಯಭಾರಿಯಂತಿದ್ದು, ವಕೀಲರ ಸಮಾಜಮುಖಿ ಕಾರ್ಯನಿರ್ವಹಣೆಯಿಂದ ಅವರ ವೃತ್ತಿಶ್ರೇಷ್ಠತೆ ಬಿಂಬಿತವಾಗುತ್ತದೆ ಎಂದವರು ಬಣ್ಣಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್‌ನಲ್ಲಿ ಪ್ರತಿಷ್ಠಿತ ಶ್ರೀ ಕೆಂಗಲ್ ಹನುಮಂತಯ್ಯ ಕಾನೂನು ಮಹಾವಿದ್ಯಾಲಯದ 42ನೇ ಪದವಿ ದಿನ (Graduation Day) ಸಮಾರಂಭದಲ್ಲಿ ಭಾಗವಹಿಸಿ, ಕಾನೂನು ಶಿಕ್ಷಿತರಿಗೆ ಮಾರ್ಗದರ್ಶನ ಭಾಷಣ ಮಾಡಿದ ನ್ಯಾಯಮೂರ್ತಿ ಇಂದ್ರೇಶ್, ಭಾವೀ […]

Continue Reading

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಉಡುಪಿ ವೈದ್ಯನಿಗೆ ಬಿತ್ತು ಕೇಸು

ಕರಾವಳಿಯಲ್ಲಿ ಪ್ರತಿಯೊಂದು ಬಾರಿಯೂ ಧರ್ಮ ದ್ವೇಷ ವಿಜೃಂಭಿಸುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣಗಳು ಕರಾವಳಿಯ ಸೌಹಾರ್ದ ವಾತಾವರಣಕ್ಕೆ ಧಕ್ಕೆ ಬರುವ ಪ್ರಸಂಗಗಳು ಪ್ರತಿ ಬಾರಿಯೂ ನಡೆಯುತ್ತಲೇ ಇರುತ್ತದೆ. ಇದೀಗ ಸಾಮಾಜಿಕ ಜಾಲತಾಣ ‘X’ ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿ ಯಾಗಿ ಕಾಮೆಂಟ್ ಮಾಡಿದ ಆರೋಪದಡಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಕೀರ್ತನ್ ಉಪಾಧ್ಯ ಲಾನ್ಲಿ […]

Continue Reading

ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ.! ವಾಲ್ಮೀಕಿ, ಮುಡಾ ಬೆನ್ನಲ್ಲೇ ವಕ್ಫ್‌ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ದೂರು

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಿದ್ದಂತೆ, ಹಗರಣಗಳು ಸಾಲಾಗಿ ಬೆಳಕಿಗೆ ಬರುತ್ತಿವೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್‌ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಿದ್ದಂತೆ ಒಂದರ ಹಿಂದೆ ಒಂದರಂತೆ ಹಗರಣಗಳು ಸಾಲಾಗಿ ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಮತ್ತೊಂದು […]

Continue Reading

ಆಪದ್ಬಾಂಧವನ ‘ಮುಸೀಬತ್’ ಒಂದೊಂದೇ ಹೊರ ಬರತೊಡಗಿದೆ

ಮಗಳ ಖಾಸಗಿ ವೀಡಿಯೊ ತುಣುಕುಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಬಿಟ್ಟಿ ಖತರ್ನಾಕ್ ಸಮಾಜಸೇವೆಯ ಸೋಗಿನಲ್ಲಿದ್ದ ಆಪದ್ಬಾಂಧವನ ‘ಮುಸೀಬತ್’ ಒಂದೊಂದೇ ಹೊರಗೆ ಬರತೊಡಗಿದೆ. ಸ್ವತಹ: ತನ್ನ ಮಗಳ ಖಾಸಗಿ ವೀಡಿಯೊ ತುಣುಕುಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಡುಬಿದ್ರಿಯಲ್ಲಿ ಸಂಭವಿಸಿದೆ. ಆಪದ್ಭಾಂಧವ ಆಸಿಫ್ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಡ್ಕ ನಿವಾಸಿ ಆಸಿಫ್ ಆರೋಪಿಯಾಗಿದ್ದಾನೆ. ಮಗಳ ವೀಡಿಯೊಗಳನ್ನು ವಾಟ್ಸಪ್ ಗ್ರೂಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. […]

Continue Reading

ಸೆಪ್ಟೆಂಬರ್ 15 ರ ನಂತರ HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳು ರಸ್ತೆಗಿಳಿದರೆ 1000 ದಂಡ ವಿಧಿಸುವುದಾಗಿ ಸರ್ಕಾರ ಎಚ್ಚರಿಕೆ

ಅತೀ ಸುರಕ್ಷಿತ HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಹೊರಬೀಳುತ್ತಿದೆ. ವಾಹನ ಸವಾರರು ಈ HSRP ಅಳವಡಿಕೆಯ ಬಗ್ಗೆ ಹೆಚ್ಚು ಚಿಂತಿಸುವಂತಾಗಿದೆ. ನಿಗದಿತ ಸಮಯದೊಳಗೆ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈಗಾಗಲೇ ಸರ್ಕಾರ ಸಾಕಷ್ಟು ಬಾರಿ HSRP ಅಳವಡಿಕೆಯ ಕೊನೆಯ ದಿನಾಂಕವನ್ನು ಸರ್ಕಾರ ನಿಗದಿ ಪಡಿಸಿತ್ತು. ಎರಡು ಬಾರಿ ಸರ್ಕಾರ ಗಡುವನ್ನು ವಿಸ್ತರಿಸಿದೆ. ಸದ್ಯ ಸರ್ಕಾರ ಸೆಪ್ಟೆಂಬರ್ 15, 2024 ಕೊನೆಯ ದಿನಾಂಕವಾಗಿ ಘೋಷಿಸಿದೆ. ಇದೀಗ ಮತ್ತೆ ಸಮಯಾವಕಾಶವನ್ನು ಸರ್ಕಾರ ವಿಸ್ತರಿಸಿದೆ. ವಾಹನ […]

Continue Reading