ಗ್ರಾಮಪಂಚಾಯತಿನಲ್ಲಿಯೇ ಇಂದಿನಿಂದ ಜನನ, ಮರಣ ನೋಂದಣಿ

ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮಪಂಚಾಯತಿಯಲ್ಲೇ ಆರಂಭಿಸುವ ಪ್ರಕ್ರಿಯೆ ಇಂದಿನಿಂದ (ಜುಲೈ 1) ಜಾರಿಗೆ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು ಜುಲೈ 1 ರಿಂದ ಆ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಜನನ/ಮರಣ ಉಪನೋಂದಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಡೇಟಾ ಎಂಟ್ರಿ ಆಪರೇಟರ್ ಗಳಿಗೆ […]

Continue Reading

ನಾವೂರು-ಅತ್ಯಡ್ಕ-ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ,ಜನರ ಆಕ್ರೋಶ, ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್

ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಿ ಬೋರ್ಡ್ ಅವಳವಡಿಸಿದೆ. ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019 ರ ಭೀಕರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ […]

Continue Reading

ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿದರೆ, ದೆಹಲಿಯಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ಸವಾಲಾಗಲಿದೆ: ಪ್ರಶಾಂತ್ ಕಿಶೋರ್

2025ರಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೈತ್ರಿಕೂಟವನ್ನು (NDA) ಮುನ್ನಡೆಸುವವರು ಯಾರು.? 2025ರಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವನ್ನು (NDA) ಯಾರು ಮುನ್ನಡೆಸುತ್ತಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಗೆ ನಿರ್ಣಾಯಕ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಿಶೋರ್ ಪ್ರಕಾರ, ಬಿಹಾರದ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿದರೆ, ದೆಹಲಿಯಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ಸವಾಲಾಗಲಿದೆ. ರಾಷ್ಟ್ರೀಯ ಚುನಾವಣಾ ಫಲಿತಾಂಶಗಳು ಬಿಜೆಪಿಯು […]

Continue Reading

ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲಿ ಭ್ರಷ್ಟಾಚಾರ ಆರೋಪ; ಮಹಾರಾಷ್ಟ್ರದ 33 ಕಡೆ ಸಿಬಿಐ ದಾಳಿ, 14 ಜನರ ವಿರುದ್ಧ ಪ್ರಕರಣ ದಾಖಲು, ಇಬ್ಬರ ಬಂಧನ.

ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ 33 ಕಡೆ ಸಿಬಿಐ ದಾಳಿ ನಡೆಸಿ 14 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧಿಸಿದೆ. ಲೋಯರ್ ಪ್ಯಾರೆಲ್ ಹಾಗೂ ಮಲಾಡ್‌ನಲ್ಲಿರುವ ಸೇವಾ ಕೇಂದ್ರಗಳಲ್ಲಿನ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಜಾಲವು ಈ ಭ್ರಷ್ಟಾಚಾರದಲ್ಲಿ ತೊಡಗಿರುವುದನ್ನು ಪತ್ತೆ ಮಾಡಿರುವ ಸಿಬಿಐ ಅಧಿಕಾರಿಗಳು ಏಜೆಂಟರು ಹಾಗೂ ಮಧ್ಯವರ್ತಿಗಳ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಿದೆ. ಈ ಮಧ್ಯವರ್ತಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅಧಿಕಾರಿಗಳು ಅಗತ್ಯ ದಾಖಲೆ ಇಲ್ಲದಿದ್ದರೂ, ಅವುಗಳನ್ನು […]

Continue Reading

ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳಿಗೆ ತಿದ್ದುಪಡಿ; ಜುಲೈ 1 ರಿಂದ ಜಾರಿ: ಟೆಲಿಕಾಂ ನಿಯಂತ್ರಣ ಪ್ರಾಧಿಕಾರ

ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಹೇಳಿದೆ. ಟ್ರಾಯ್ ಕಳೆದ ವಾರ ತನ್ನ ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳಲ್ಲಿ ಬದಲಾವಣೆಗಳನ್ನು ಪ್ರಕಟಿಸಿದೆ. ಇತ್ತೀಚಿನ ತಿದ್ದುಪಡಿಯ ಪ್ರಕಾರ, ಸಿಮ್ ಕಾರ್ಡ್ ಅನ್ನು ಬದಲಾಯಿಸಿದರೆ ಸಂಬಂಧಿತ ಮೊಬೈಲ್ ಸಂಖ್ಯೆಯನ್ನು ಏಳು ದಿನಗಳವರೆಗೆ ಬೇರೆ ಟೆಲಿಕಾಂ ಆಪರೇಟರ್‌ಗೆ ಪೋರ್ಟ್ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಸಿಮ್ ಸ್ವಾಪ್ ಬಳಿಕ 10 ದಿನ ಕಾಯಬೇಕಿತ್ತು. ಆದರೆ ಇತ್ತೀಚಿನ […]

Continue Reading

ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರವರ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷದಲ್ಲೇ ಅಸಮಾಧಾನ; ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರವರ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದ್ದು, ಹುದ್ದೆಯಿಂದ ತೆರವುಗೊಳಿಸಿ ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ಕೂಡ ಆರಂಭವಾಗಿದೆ ಎನ್ನಲಾಗಿದೆ.ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಲ್ಲಿ ವಿಫಲರಾಗಿರುವ ಅಶೋಕ್‌ ಬದಲಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಛಾಟಿ ಬೀಸುವ ಯುವ ನಾಯಕನನ್ನು ನೇಮಿಸುವ ಬಗ್ಗೆ ಚಿಂತನೆ ನಡೆದಿದೆ. ಆರ್. ಅಶೋಕ್‌ ಅವರ ಸ್ಥಾನಕ್ಕೆ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ಕುಮಾರ್‌ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ […]

Continue Reading

ಎಫ್‌ಐಆರ್‌ ದಾಖಲಾಗುವ ಮುನ್ನವೇ ಕೇಂದ್ರ ಗೃಹ ಇಲಾಖೆಯಿಂದ ಬಂದಿದ್ದ ಪತ್ರ; ಯೆಡಿಯೂರಪ್ಪ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲು ಸೂಚಿನೆ

ಲೈಂಗಿಕ ದರ್ಜನ್ಯ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪರವರನ್ನು ಬಂಧಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಡ ಹೇರಿದ್ದರು ಎಂಬ ಆರೋಪ ಕೇಳಿಬಂದಿದೆ. ನ್ಯೂಸ್‌ ಮಿನಿಟ್‌ ಎಂಬ ಸುದ್ದಿ ಸಂಸ್ಥೆಯೊಂದು ಈ ಕುರಿತು ವರದಿ ನೀಡಿದ್ದು, ಒಂದು ವಾರದ ಹಿಂದೆಯೇ ಕರ್ನಾಟಕ ಪೊಲೀಸ್‌ ಇಲಾಖೆಗೆ ಪತ್ರ ಬರೆದಿದ್ದ ಕೇಂದ್ರ ಗೃಹ ಇಲಾಖೆ, ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ದ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ಕೇಳಿತ್ತು ಎಂದು ಹೇಳಿದೆ. ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ದ ಎಫ್‌ಐಆರ್‌ ದಾಖಲಾಗುವ ಮುನ್ನವೇ […]

Continue Reading

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮತ್ತೊಂದು ಟಿ.ಡಿ.ಆರ್ ಹಗರಣದ ವಾಸನೆ

‘ಭೂ’ದಂಧೆಕೋರರು, ರಿಯಲ್ ಎಸ್ಟೇಟ್, ಬಿಲ್ಡರ್ ಲಾಬಿಗಳು, ಭ್ರಷ್ಟ ರಾಜಕಾರಣಿಗಳು, ಆಧಿಕಾರಿಗಳ ಪಾಲಿಗೆ ಸಮೃದ್ದ ಹುಲ್ಲುಗಾವಲಾಗಿ ಮಾರ್ಪಟ್ಟಿದೆ: ಮುನೀರ್ ಕಾಟಿಪಳ್ಳ ಮಂಗಳೂರು ನಗರದಲ್ಲಿ ಖಾಸಗಿ ಜಮೀನು ಸ್ವಾಧೀನಕ್ಕೆ ಪ್ರತಿಯಾಗಿ ನಗರಪಾಲಿಕೆ ಟಿ‌.ಡಿ.ಆರ್ ನೀಡುವುದು ದೊಡ್ಡ ದಂಧೆಯಾಗಿ ಬದಲಾಗಿದೆ. ರಸ್ತೆ ಅಗಲೀಕರಣ, ತುರ್ತು ಅಗತ್ಯದ ಜಮೀನುಗಳ ಸ್ವಾಧೀನಕ್ಕೆ ಹಣದ ಬದಲಿಗೆ ನಗರ ಪಾಲಿಕೆಗಳು ಟಿ.ಡಿ.ಆರ್ ನೀಡುವುದು ಸರಕಾರದ ಒಂದು ಪ್ರಾಯೋಗಿಕ ಕ್ರಮ. ಮಂಗಳೂರಿನಲ್ಲಿ ಅದು ಭೂ ದಂಧೆಕೋರರು, ರಿಯಲ್ ಎಸ್ಟೇಟ್, ಬಿಲ್ಡರ್ ಲಾಬಿಗಳು, ಭ್ರಷ್ಟ ರಾಜಕಾರಣಿಗಳು, ಆಧಿಕಾರಿಗಳ ಪಾಲಿಗೆ ಸಮೃದ್ದ […]

Continue Reading

ಡಿ.ಕೆ ಶಿವಕುಮಾರ್ ಅವರನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಪಾಳಯದ ಹಲವು ಸಚಿವರು ಭರ್ಜರಿ ಪ್ಲಾನ್.!

ಡಿಕೆಶಿ ಮಾಸ್ ಲೀಡರ್ ಅಲ್ಲ, ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೈಬಿಡಬೇಕು; ಸಿದ್ದು ಬೆಂಬಲಿಗರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಕಾರಣವಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಪಾಳಯದ ಹಲವು ಸಚಿವರು ಭರ್ಜರಿ ಪ್ಲಾನ್ ಮಾಡುತ್ತಿದ್ದಾರೆ. ಸದ್ಯ ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಹವಣಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶವನ್ನು ಮುಂದಿಟ್ಟುಕೊಂಡು ಡಿ ಕೆ ಶಿವಕುಮಾರ್ ರವರನ್ನು ಹಣಿಯಲು ಸಿದ್ದು ಬೆಂಬಲಿಗರು ಹುನ್ನಾರ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಡಿಕೆಸಿ ಮಾಸ್ […]

Continue Reading

ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗೀ ವಾಹನಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ನೇತ್ರತ್ವದಲ್ಲಿ ನಗರದ ಕ್ಲಾಕ್ ಟವರ್‌ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಶಾಲಾ ಮಕ್ಕಳ ವಾಹನ ಚಾಲಕರು ಆಕ್ರೋಶಭರಿತವಾಗಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಬಿಳಿ ಬಣ್ಣದ ಖಾಸಗೀ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ […]

Continue Reading