ಪುತ್ತೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ಮೂಲದ ವ್ಯಕ್ತಿ ಸೇರಿದಂತೆ, ಮೂವರು ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 106 ಕೆ.ಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ ಎಂಬವರನ್ನು ಈ ಮೊದಲೇ ದಸ್ತಗಿರಿ ಮಾಡಲಾಗಿದ್ದು, ಆರೋಪಿಗಳಿಗೆ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ಮೂಲದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ನೇತೃತ್ವದ ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ […]

Continue Reading

ಬಜಪೆ ಪೊಲೀಸರ ಕಾರ್ಯಾಚರಣೆ; ಕಳ್ಳತನ ಆರೋಪಿಗಳ ಬಂಧನ, 27 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ವಶ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ರವರು ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ಹೋದಾಗ ರಾತ್ರಿ ಮನೆಯಲ್ಲಿದ್ದ ಸುಮಾರು 23 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 1ಲಕ್ಷದ 25 ಸಾವಿರ ರೂಪಾಯಿ ನಗದು ಹಣ ದಿನಾಂಕ 23-09-2025 ರಂದು ಕಳ್ಳತನವಾಗಿತ್ತು. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂಖ್ಯೆ 176/2025 ರಂತೆ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಜಪೆ ಪೊಲೀಸರು ಆರೋಪಿಗಳ ಜಾಡು ಹಿಡಿದು ಮಾಹಿತಿ ಕಲೆ ಹಾಕಿದಾಗ […]

Continue Reading

ಕೊಲೆ ಪ್ರಕರಣದಲ್ಲಿ ಸದ್ಯ ಜೈಲಲ್ಲಿರುವ ಜ್ಯೋತಿಷಿ ಕಮಲಾಕರ ಭಟ್ಟನ ವಿರುದ್ಧ ಮತ್ತೊಂದು ಗಂಭೀರ ಆರೋಪ; ಗೋಶಾಲೆ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಸಂಪಾದನೆ

ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರ ಸೇರಿದಂತೆ ಒಟ್ಟು ಎಂಟು ಆರೋಪಿಗಳು ವಸಂತ ನಾಯಕನ ಕೊಲೆ ಪ್ರಕರಣದಲ್ಲಿ ಸದ್ಯ ಕಂಬಿ ಎಣಿಸುತ್ತಿದ್ದಾರೆ. ಕಮಲಾಕರ ಭಟ್ಟ ಜ್ಯೋತಿಷಿ ವಿರುದ್ಧ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದೆ. ಗೋಶಾಲೆ ಹೆಸರಿನಲ್ಲಿ ಈತ ಕೋಟಿ ಕೋಟಿ ಆಸ್ತಿ ಸಂಪಾದಿಸಿದ್ದಾನೆ ಅನ್ನುವ ಆರೋಪ ಕೇಳಿ ಬಂದಿದೆ. ಗೋಶಾಲೆ ಹೆಸರಿನಲ್ಲಿ ಜ್ಯೋತಿಷಿ ಕಮಲಾಕಾರ್ ಭಟ್ ಕೋಟಿ ಕೋಟಿ ಆಸ್ತಿಗಳಿಕೆ ಮಾಡಿ ಶಿವಮೊಗ್ಗದ ಮುದುವಾಲ ಗ್ರಾಮದಲ್ಲಿ ಈ ಒಂದು ಜಮೀನು ಖರೀದಿಸಿದ್ದಾನೆ. ಮಠ ಹಾಗೂ ಗೋಶಾಲೆ […]

Continue Reading

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನಸಾಮಾನ್ಯರ ಜೇಬಿಗೆ ಕತ್ತರಿ; ಎಪ್ರಿಲ್ ನಂತರ ರಾಜ್ಯದ ಜನತೆಗೆ ಕರೆಂಟ್ ಶಾಕ್.!

ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಶಾಕ್ ನೀಡಲು ರೆಡಿಯಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲು ವಿದ್ಯುತ್ ಸರಬರಾಜು ಕಂಪನಿಗಳು ಸಜ್ಜಾಗಿವೆ. ಸದ್ಯದಲ್ಲೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದ್ದು, ಜನರಿಗೆ ಕರೆಂಟ್ ಶಾಕ್ ಹೊಡೆಯುವುದು ಖಚಿತ. ರಾಜ್ಯಕ್ಕೆ ವಿದ್ಯುತ್ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ಆದಾಯಕ್ಕಿಂತ ವೆಚ್ಚವೇ ಅಧಿಕವಾಗಿದ್ದು, ಕಂಪನಿಗಳು ನಷ್ಟದ ಹಳಿಯಲ್ಲಿವೆ. ಈ ನಷ್ಟವನ್ನು ಸರಿದೂಗಿಸಲು ಮತ್ತು ಕಂಪನಿಗಳ ನಿರ್ವಹಣೆಯನ್ನು ಸುಲಲಿತವಾಗಿ […]

Continue Reading

ಗಂಜಿಮಠ: ಸೂರಲ್ಪಾಡಿ ಟೋಲ್ ಪ್ಲಾಜಾ಼ ನಿರ್ಮಾಣ ನಿಯಮ ಬಾಹಿರ. ಅಂತರದ ನಿಯಮಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಸಾಲಾಗಿ ಟೋಲ್ ಗೇಟ್ ಗಳನ್ನು ನಿರ್ಮಿಸಲಾಗುತ್ತಿದೆ: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪ.

ಗಂಜಿಮಠ ಟೋಲ್‌ಗೇಟ್ ಗೆ‌ ವಿವಿಧ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಭೇಟಿ ಸೂರಲ್ಪಾಡಿ ಟೋಲ್ ಪ್ಲಾಜಾ಼ ನಿರ್ಮಾಣ ನಿಯಮ ಬಾಹಿರ. ಅಂತರದ ನಿಯಮಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಸಾಲಾಗಿ ಟೋಲ್ ಗೇಟ್ ಗಳನ್ನು ನಿರ್ಮಿಸಲಾಗುತ್ತಿದೆ. ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಜ಼ಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಇಂದು ಭೇಟಿ ನೀಡಿ ನಿಯಮಗಳ ಪಾಲನೆಯ ಕುರಿತಾಗಿ ಪರಿಶೀಲನೆ ನಡೆಸಿತು. ಟೋಲ್ ಗೇಟ್ ಗಳ ನಡುವಿನ ಅಂತರ […]

Continue Reading

ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಅವರ ಖಾಸಗಿ ವೀಡಿಯೋ ಮಾಡಿ 50 ಲಕ್ಷಕ್ಕೆ ಬೇಡಿಕೆ; ಮೂವರು ಯೂಟ್ಯೂಬರ್‌ಗಳ ಬಂಧನ, ಸ್ವತ್ತು ವಶ

ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಅವರ ಖಾಸಗಿ ಆಗುಹೋಗುಗಳ ವೀಡಿಯೋ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಯೂಟ್ಯೂಬರ್‌ಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಗೋಕಾಕ್‌ನ ಅಬ್ದುಲ್‌ ರಷೀದ್ ನಜರ್ ಮಕಾನದಾರ, ಸಮೀರ್ ನಿಸಾರ್‌ಅಹಮದ್ ಶೇಖ್, ಮೊಹಮ್ಮದ್ ದಿಲಾವರ ನಜೀರ್‌ಅಹಮದ್ ಬಾಳೇಕಿಂದ್ರಿ ಬಂಧಿತರು. ಆರೋಪಿಗಳಿಂದ ವೀಡಿಯೋ, ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳು, ಲ್ಯಾಪ್‌ಟಾಪ್, ಪೆನ್‌ಡ್ರೈವ್, ಮೊಬೈಲ್‌, ಚಿಪ್‌ಗಳು, ಸಿಮ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ತಂಡದಲ್ಲಿ ಯಾರ್ಯರು ಇದ್ದಾರೆ, ಇವರಿಗೆ ಸಹಾಯ ನೀಡಿದವರು, ಇವರಿಗೆ ಸಹಕಾರ ನೀಡಿದವರು […]

Continue Reading

ಬ್ಯಾಲೆಟ್ ಪೇಪರ್ ನಲ್ಲೇ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಏಪ್ರಿಲ್, ಮೇನಲ್ಲಿ ಚುನಾವಣೆ ಸಾಧ್ಯತೆ

ರಾಜ್ಯದಲ್ಲಿ ಗ್ರಾಮಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ […]

Continue Reading

ಮಂಗಳೂರು ಸೆನ್ ಪೊಲೀಸರ ಕಾರ್ಯಾಚರಣೆ: ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿರುವ ಮಹಾ ವಂಚಕರ ಬಂಧನ.

ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿಗಳನ್ನು ಬಂಧಿಸಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿರುತ್ತದೆ.ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಸದ್ರಿ […]

Continue Reading

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತ; ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ: ಫಣೀಂದ್ರ ಕೆ

ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ, ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ. ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಯವರು ಆಕ್ರೋಶ […]

Continue Reading

ಕುಪ್ಪೆಪದವು: ನಿವೇಶನ ವಂಚಿತರ ಸಭೆ, ಪೆಬ್ರವರಿ 16 ರಂದು ಪಂಚಾಯತ್ ಕಚೇರಿ ಮುಂಭಾಗ ಗುಡಿಸಲು ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನ

ಏಳು ವರ್ಷಗಳ ಹಿಂದೆ ಹಕ್ಕು ಪತ್ರ ಪಡೆದು, ನಿವೇಶನ ಸ್ವಾಧೀನ ದೊರಕದೆ ಸಂತ್ರಸ್ತರಾಗಿರುವ ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ 80 ವಸತಿ ರಹಿತ ಕುಟುಂಬಗಳ ಸಮಸ್ಯೆಗಳನ್ನು ಚರ್ಚಿಸಲು ನಿವೇಶನ ರಹಿತರ ಹೋರಾಟ ಸಮಿತಿ, ಕುಪ್ಪೆಪದವು ಸಂತ್ರಸ್ತರ ಸಭೆ ನಡೆಸಿತು. ಕಳೆದ ಒಂದು ವರ್ಷದಿಂದ ಹಲವು ಹಂತದ ಹೋರಾಟಗಳು ನಡೆಸಿದ ಸಂದರ್ಭ ಗ್ರಾಮ ಪಂಚಾಯತ್, ತಾಲೂಕು ಆಡಳಿತಗಳು ಕೇವಲ ಭರವಸೆಗಳನ್ನು ನೀಡಿ ಕೈತೊಳೆದು ಕೊಳ್ಳುತ್ತಿದೆ. ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸುತ್ತಿವೆ. ಈ ಹಿನ್ನಲೆಯಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸಮಿತಿಯ ಸಭೆಯಲ್ಲಿ […]

Continue Reading