ಕೋಮುಧ್ವೇಶ, ಹಿಂಸೆಗೆ ಪ್ರಚೋದಿಸುವಂತೆ ಭಾಷಣ; ಕಲ್ಲಡ್ಕ ಪ್ರಭಾಕರ್ ಭಟ್, ವಿಕಸನ ಟಿ. ವಿ, ಆಯೋಜಕರ ವಿರುದ್ದ ಪ್ರಕರಣ ದಾಖಲು

ಪುತ್ತೂರು ನಿವಾಸಿ ರಾಮಚಂದ್ರ ಕೆ ಎಂಬವರ ದೂರಿನಂತೆ, ದಿನಾಂಕ 12.01.2026ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ. ಸದ್ರಿ ಭಾಷಣವನ್ನು “VIKASANA TV” (ವಿಕಸನ ಟಿವಿ) ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿರುತ್ತಾರೆ. ಸದ್ರಿ ಕಾರ್ಯಕ್ರಮದಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ […]

Continue Reading

ನಕಲಿ ದಾಖಲೆ ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್‌ ಕೈವಶ; ಕೆನರಾ ಲೈಟಿಂಗ್ ವಿರುದ್ದ ಕ್ರಿಮಿನಲ್ ಪ್ರಕರಣ

ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್‌ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಕೆನರಾ ಲೈಟಿಂಗ್ ಇಂಡಸ್ಟ್ರಿಯಲ್ ಖಾಸಾಗಿ ಲಿಮಿಟೆಡ್ ಕಂಪೆನಿಯ ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ ನೀಡಿದೆ. RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು […]

Continue Reading

ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಚನ್ನರಾಯಪಟ್ಟಣದ ಬೆಳಗಿಹಳ್ಳಿಯ ಚಂದ್ರೆಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 60/2009, ರಂತೆ ದಾಖಲಾದ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ವಂಚಿಸಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ಮೂಲದ ನಿವಾಸಿ S. N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 20/01/2026 ರಂದು […]

Continue Reading

ಬೆಂಗಳೂರು ಸೈಬರ್ ಕ್ರೈಂ ಪೊಲೀಸರ ಚುರುಕಿನ ಕಾರ್ಯಾಚರಣೆ; ಒಂದೇ ಗಂಟೆಯೊಳಗೆ ನಕಲಿ ಖಾತೆಗೆ ವರ್ಗಾವಣೆಯಾಗಿದ್ದ 2.16 ಕೋಟಿ ರಿಲೀಸ್

ನೈಜೀರಿಯಾದಲ್ಲಿ ಕುಳಿತು, ಬೆಂಗಳೂರು ಮೂಲದ ಪಾರ್ಮಾ ಕಂಪೆನಿಗೆ ನಕಲಿ ಇಮೇಲ್ ಮೂಲಕ ವಂಚನೆ ಮಾಡಲು ಯತ್ನಿಸಿದ್ದ ಸೈಬರ್ ವಂಚಕರ ಬಳಿ 2.16 ಕೋಟಿ ರೂಪಾಯಿಗಳನ್ನು ಸಿಸಿಬಿ ಸೈಬರ್ ಕ್ರೈಮ್ ಇಲಾಖೆ ಯಶಸ್ವಿಯಾಗಿ ರಕ್ಷಿಸಿದೆ. ಗ್ರೂಪ್ ಫಾರ್ಮಾ ಕಂಪನಿಯ ಅಕೌಂಟೆಂಟ್ ಕೇಶವ್ ಅವರ ಹೆಸರಿನಲ್ಲಿ ವಂಚಕರು ನಕಲಿ ಇಮೇಲ್ ಐಡಿ ಸೃಷ್ಟಿಸಿ, ಅದನ್ನು ರೆಡ್ಡಿಸ್ ಲ್ಯಾಬೋರೇಟರಿಗೆ ಕಳುಹಿಸಿದ್ದರು. ಗ್ರೂಪ್ ಫಾರ್ಮಾ ಮತ್ತು ರೆಡ್ಡಿಸ್ ಲ್ಯಾಬೋರೇಟರಿ ಉದ್ಯಮ ನಡೆಸುತ್ತಿದ್ದರಿಂದ, ವ್ಯವಹಾರ ಸಂಬಂಧಿತ ಪಾವತಿ ಎಂದು ಭಾವಿಸಿ ರೆಡ್ಡೀಸ್ ಲ್ಯಾಬೋರೇಟರಿ 2.16 […]

Continue Reading

ಪುತ್ತೂರು ಗ್ರಾಮಾಂತರ ಪೊಲೀಸರ ಬೃಹತ್ ಕಾರ್ಯಾಚರಣೆ; 106 ಕೆ.ಜಿ ಗಾಂಜಾ ವಶ, ಆರೋಪಿಗಳ ಬಂಧನ

ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ದಿನಾಂಕ: 19-01-2026 ರಂದು ಸಂಜೆ, ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ತಡೆದು ನಿಲ್ಲಿಸಿ, ಕಾರಿನ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಎಂಬುದಾಗಿ ತಿಳಿದು ಬಂದಿದ್ದು, ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ […]

Continue Reading

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) – ಒಂದು ಸಮಗ್ರ ಪ್ರಾಯೋಗಿಕ ಮಾರ್ಗದರ್ಶಿ

ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಏನು ಮಾಡಬೇಕು.? ದಾಖಲೆಗಳ ಬಗ್ಗೆ ಮಾಹಿತಿ, ಯಾವಾಗ ದಾಖಲೆಗಳು ಬೇಕು? ✍️. ಇಸ್ಮಾಯಿಲ್ ಸುನ್ನಾಲ್. ವಕೀಲರು, ಮಂಗಳೂರು

Continue Reading

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆ ಮರೆಸಿ ಕೊಂಡಿದ್ದ ಆರೋಪಿ ನವೀನ್ ಸಿಕ್ವೇರಾ ಬಂಧನ

ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ಎಂಬಾತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿರುತ್ತದೆ. ನಂತರ ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ […]

Continue Reading

ಕಾಂಗ್ರೆಸ್ ಸಂಘಟನೆಗೆ ‘ಲೀಗಲ್ ಬ್ಯಾಂಕ್’ ಬಲ; ದಕ್ಷಿಣ ಕನ್ನಡದಲ್ಲಿ ಮೊದಲ ಪ್ರಯೋಗ ಯಶಸ್ವಿ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಲೀಗಲ್ ಬ್ಯಾಂಕ್’ ಹಾಗೂ ‘ಲಾಯರ್ ಡೈರೆಕ್ಟರಿ’ ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ ‘ಓಟ್ ಚೋರಿ’ ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ತಂದಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, […]

Continue Reading

ಗಂಡ-ಹೆಂಡತಿ ಸೇರಿ ಹನಿಟ್ರ್ಯಾಪ್; 150ಕ್ಕೂ ಹೆಚ್ಚು ಮಂದಿ ಹನಿಟ್ರ್ಯಾಪ್ ಖೆಡ್ಡಾಕ್ಕೆ, ಉದ್ಯಮಿಗಳು, ವೈದ್ಯರು, ವಿದ್ಯಾರ್ಥಿಗಳೇ ಟಾರ್ಗೆಟ್

ಗಂಡ ಹೆಂಡತಿ ಒಂದಾಗಿ ಬರೊಬ್ಬರಿ 150ಕ್ಕೂ ಹೆಚ್ಚು ಮಂದಿ ಯುವಕರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ, ಮೂರು ಕೋಟಿ ರೂ. ಗೂ ಅಧಿಕ ಹಣ ಸುಲಿಗೆ ಮಾಡಿರುವ ಆಘಾತಕಾರಿ ಘಟನೆಯೊಂದು ಅಂದ್ರಪ್ರದೇಶದ ಕರೀಂ ನಗರದಲ್ಲಿ ಬೆಳಕಿಗೆ ಬಂದಿದೆ. ಪಾಪಿ ಪತಿಯೊಬ್ಬ ತನ್ನ ಸುರ ಸುಂದರಿ ಪತ್ನಿಯನ್ನು ಅನ್ಯ ಪರಪುರುಷರ ಜೊತೆ ಮಂಚಕ್ಕೆ ಏರಿಸಿ, ಅವರ ವಿವಿಧ ಅಶ್ಲೀಲ ಭಂಗಿಗಳನ್ನು ತನ್ನ ಮೊಬೈಲ್ ಪೋನಿನಲ್ಲಿ ಸೆರೆ ಹಿಡಿದು, ದಂಪತಿಗಳಿಬ್ಬರೂ ಒಟ್ಟು ಸೇರಿ ಬರೋಬ್ಬರಿ 150ಕ್ಕೂ ಹೆಚ್ಚು ಮಂದಿ ಯುವಕರನ್ನು ಹನಿಟ್ರ್ಯಾಪ್ […]

Continue Reading

ರಾಜ್ಯದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ಲಿಂಕ್; ಮಕ್ಕಳೇ ಮಾದಕ ಜಾಲದ ಟಾರ್ಗೆಟ್, ಸಿಂಹಸ್ವಪ್ನರಾದ ‘ಮಂಗಳೂರು ಪೊಲೀಸರು’

ಕರಾವಳಿ ಅಂದರೆ ಶಿಕ್ಷಣಕ್ಕೆ ಹೆಸರುವಾಸಿ. ಇಲ್ಲಿರುವ ಶಿಕ್ಷಣ ಸಂಸ್ಥೆಗಳು ತಮ್ಮ ಅತ್ಯುತ್ತಮ ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿ. ‘ಎಜ್ಯುಕೇಶನ್ ಹಬ್’ ಎನಿಸಿಕೊಂಡಿರುವ ಮಂಗಳೂರಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹೊರಜಿಲ್ಲೆ, ಹೊರರಾಜ್ಯಗಳ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇವರು ಸೇರಿದಂತೆ ಯುವ ಸಮೂಹ ಡ್ರಗ್ಸ್ ಮಾರುಕಟ್ಟೆಯ ಮುಖ್ಯ ಟಾರ್ಗೆಟ್. ನೆಲ, ಜಲ, ವಾಯು ಸಂಪರ್ಕ ಎಲ್ಲವನ್ನು ಜಿಲ್ಲೆ ಹೊಂದಿರುವುದರಿಂದ ಡ್ರಗ್ಸ್ ಕಾಳದಂಧೆಗೆ ಅನುಕೂಲಕರವಾಗಿ ಪರಿಣಮಿಸಿದೆ. ರಾತ್ರಿಯಾದರೆ ಸಾಕು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ನಶಾ ಲೋಕದಲ್ಲಿ ತೇಲಾಡುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಮುಖದಲ್ಲೊಂದು ಕುರುಚಲು […]

Continue Reading