‘ಭ್ರಷ್ಟಾಚಾರ ಆರೋಪ: ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ರಾಜೀನಾಮೆಗೆ ಗ್ರಾಮಸ್ಥರ ಪಟ್ಟು; ಗ್ರಾಮಸಭೆ ಮೊಟಕು.!

’ಭ್ರಷ್ಟಾಚಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮುಂದಕ್ಕೆ ಯಾವುದೇ ಸಭೆ ನಡೆಸಲು ಬಿಡುವುದಿಲ್ಲ” ಗ್ರಾಮಸ್ಥರು ಸಾಮೂಹಿಕವಾಗಿ ಪ್ರತಿಜ್ಞೆ ಪೆರುವಾಯಿ: ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರ ರಾಜೀನಾಮೆಗೆ ಪಟ್ಟು ಹಿಡಿದ ಗ್ರಾಮಸ್ಥರು, ಗ್ರಾಮಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಪರಿಣಾಮ ಸಭೆಯನ್ನು ಮೊಟಕುಗೊಳಿಸಿದ ಘಟನೆ ಬುಧವಾರ ದಿನಾಂಕ 10/12/2025 ನಡೆಯಿತು. ಅಧ್ಯಕ್ಷರ ವಿರುದ್ಧದ ಆರೋಪಗಳು ತನಿಖೆಯಲ್ಲಿ ಸಾಬೀತಾದರೂ ರಾಜೀನಾಮೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡರು. ಗ್ರಾಮಸಭೆಯು ನಾಡಗೀತೆಯೊಂದಿಗೆ ಪ್ರಾರಂಭವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) […]

Continue Reading

ಬ್ಯಾರಿ ಕಲಾವಿದ ಮುಹಮ್ಮದ್ ಆಲಿ ಬಡ್ಡೂರು ಅವರಿಗೆ ಚಮ್ಮನ ಗೌರವ ಪ್ರಶಸ್ತಿ ಪ್ರದಾನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರು ತಾಲೂಕಿನ ಪುರಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬ್ಯಾರಿ ಕಲಾವಿದ ಮುಹಮ್ಮದ್ ಆಲಿ ಬಡ್ಡೂರು ಅವರಿಗೆ ಚಮ್ಮನ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ 2022-23 ರ ಸಾಲಿನ ಬ್ಯಾರಿ ಅಕಾಡೆಮಿ ಚಮ್ಮನ (ಗೌರವ ಪ್ರಶಸ್ತಿ) ಪುರಸ್ಕಾರಕ್ಕೆ ಮುಹಮ್ಮದ್ ಆಲಿ ಬಡ್ಡೂರು ಆಯ್ಕೆಯಾಗಿದ್ದರು. ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಂಗಭೂಮಿ ಕಲಾವಿದರಾಗಿ ಜಿಲ್ಲೆಯಾದ್ಯಂತ ತನ್ನದೇ ಆದ ಛಾಪು ಮೂಡಿಸಿರುವ ಮುಹಮ್ಮದ್ ಆಲಿ […]

Continue Reading

ಬೆಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 4.20 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ರಾಜಾರೋಷವಾಗಿ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲಾಗುತ್ತಿದೆ. ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಖದೀಮರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ನೈಜರಿಯಾ ಮೂಲದ ಒಬಿಜೆಸಿ ಚಿಗೋಜೈ ದಾವಿ, ಸನಿ ಸಾದಿಕ್, ಬೆಂಗಳೂರಿನ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ. ಬಂಧಿತರಿಂದ ಆರೋಪಿಗಳಿಂದ ಬರೋಬ್ಬರಿ 4.20 ಕೋಟಿ ರೂ. ಮೌಲ್ಯದ ಡ್ರಗ್ಸ್ ಪೊಲೀಸರಿಂದ ಜಪ್ತಿ ಮಾಡಲಾಗಿದೆ. ಆರೋಪಿಗಳು ಬಾಗಲೂರು, ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ […]

Continue Reading

ಪಂಚಾಯತ್ ರಾಜ್ ವ್ಯವಸ್ಥೆಗೆ ಕೇಂದ್ರ ಸರ್ಕಾರದಿಂದ ಗಧಾಪ್ರಹಾರ; ತಕ್ಷಣ ಸರಿಪಡಿಸುವಂತೆ ಆಗ್ರಹ..

ರಾಷ್ಟ್ರಪಿತ ಮಹಾತ್ಮ ಗಾಂಧಿಜೀವರ ಕನಸಾದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ನಿರ್ಜೀವಗೊಳಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಅತ್ಯಂತ ಖಂಡನೀಯವೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಷ್‌ಚಂದ್ರ ಶೆಟ್ಟಿ ತಿಳಿಸಿದ್ದಾರೆ. 2020–25 ನೇ ಸಾಲಿನ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜನಪ್ರತಿನಿಧಿಗಳು “ಪ್ರತಿ ಪಂಚಾಯತಿಗೂ ಕನಿಷ್ಠ ಒಂದು ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ನೇರವಾಗಿ ಬಿಡುಗಡೆ ಮಾಡಲಿದೆ” ಎಂಬ ಭರವಸೆಯನ್ನು ನೀಡಿದ್ದರು. ಆದರೆ ವಾಸ್ತವದಲ್ಲಿ, ಕಾಂಗ್ರೆಸ್ […]

Continue Reading

ಅನ್ಯಾಯದ ಪರ ಮುಲಾಜಿಲ್ಲದೆ ಗಟ್ಟಿ ಧ್ವನಿ ಎತ್ತುತ್ತಿದ್ದ ಸಿರಾಜ್ ಬಜ್ಪೆ ಗೆ ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಕಾಂಗ್ರೆಸ್ ಕಚೇರಿಗೆ ಬೀಗ

ಕಾಂಗ್ರೆಸ್ ನಲ್ಲಿ ಬಕೆಟ್ ಶೂರರು, ಪೇಮೆಂಟ್ ಗಿರಾಕಿಗಳಿಗೆ ಮಾತ್ರ ಸ್ಥಾನವೇ.? ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಗ್ರಾಮ ಪಂಚಾಯತ್ ಆಗಿದ್ದ ಬಜಪೆ ಇದೀಗ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿ ಮೊದಲ ಬಾರಿ ಚುನಾವಣೆ ಎದುರಿಸುತ್ತಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗೊಳಪಟ್ಟ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಡಿಸೆಂಬರ್ 21 ರಂದು ನಡೆಯಲಿದೆ. ಎಲ್ಲರ ಚಿತ್ತ ಬಜಪೆ ಪಟ್ಟಣ ಪಂಚಾಯತ್ ನತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಕ್ಷೇತ್ರದಾದ್ಯಂತ […]

Continue Reading

ಪುತ್ತೂರು: ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳವು; ಪ್ರಮುಖ ಆರೋಪಿ ಅಶ್ಲೇಷ್ ಭಟ್ ಸೇರಿ ನಾಲ್ವರು ಅಂದರ್

ಕಬಕ ಗ್ರಾಮದ ನೆಹರು ನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಅಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ್ ಶೆಟ್ಟಿ ಹಾಗೂ ಅಶ್ರಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳವಾಗಿದ್ದ 80 ಗೋಣಿ ಕಾಫಿ ಬೀಜಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಸ್ವಿಫ್ಟ್ ಕಾರು ಹಾಗೂ ಎರಡು ಆಟೋ ರಿಕ್ಷಾಗಳನ್ನು ಪೊಲೀಸರು […]

Continue Reading

ದೇಶದ ಒಟ್ಟು 8 ಲಕ್ಷ ವಕ್ಫ್ ಆಸ್ತಿಗಳ ಪೈಕಿ ಕೇವಲ 2.16 ಲಕ್ಷ ಆಸ್ತಿಗಳು ಮಾತ್ರ ನೋಂದಣಿಯಾಗಿವೆ

ಕರ್ನಾಟಕ ಮೊದಲ ಸ್ಥಾನ. ಶನಿವಾರ ಗಡುವು ಮುಕ್ತಾಯ, ವಕ್ಫ್ ಅಧಿಕಾರಿಗಳು ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ಸಿದ್ಧತೆ ಕೇಂದ್ರ ಸರ್ಕಾರವು ಜೂನ್ 6 ರಂದು ಪ್ರಾರಂಭಿಸಿದ ಉಮೀದ್ ಪೋರ್ಟಲ್‌ನಲ್ಲಿ ದೇಶದ ಒಟ್ಟು 8 ಲಕ್ಷ ವಕ್ಫ್ ಆಸ್ತಿಗಳ ಪೈಕಿ ಕೇವಲ 2.16 ಲಕ್ಷ ಆಸ್ತಿಗಳು ಮಾತ್ರ ನೋಂದಣಿಯಾಗಿವೆ. ನೋಂದಣಿಗೆ ನಿಗದಿಪಡಿಸಿದ್ದ ಅಂತಿಮ ಗಡುವು ಶನಿವಾರ ಮುಗಿದಿದ್ದು, ವಕ್ಫ್ ಮಂಡಳಿ ಅಧಿಕಾರಿಗಳು ಈಗ ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಒಟ್ಟು 5.17 ಲಕ್ಷ ನೋಂದಣಿ ಅರ್ಜಿಗಳಲ್ಲಿ 10,872 ಅರ್ಜಿಗಳು ತಿರಸ್ಕೃತಗೊಂಡಿವೆ. ಕರ್ನಾಟಕವು […]

Continue Reading

ಜಿಲ್ಲೆಯ ಇತಿಹಾಸದಲ್ಲೇ ಡ್ರಗ್ ಪೆಡ್ಲರ್ ಗಳಿಗೆ 14 ವರ್ಷದ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಿದ ಸರಕಾರಿ ಅಭಿಯೋಜಕರಿಗೆ ಮಂಗಳೂರು ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸನ್ಮಾನ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಹಚ್ಚಿ, ಮಾದಕ ವಸ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರನ್ನು ಬಂಧಿಸಿ ತನಿಖೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುತ್ತಾರೆ. ದಿನಾಂಕ 14-06-2022 ರಂದು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ […]

Continue Reading

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ‌ ಆಗ್ರಹಿಸಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯಿಂದ ಬೃಹತ್ ರಾಲಿ

ಜನರ ಬದುಕಿನ ಕುರಿತು ಚಿಂತಿಸದ ಬಿಜೆಪಿ, ಕಾಂಗ್ರೆಸ್ ನಾಯಕರು ಪರಸ್ಪರ ಸ್ಪರ್ಧೆಗೆ ಬಿದ್ದು ವೈಭವದ ಕಂಬಳ, ಹುಲಿ ಕುಣಿತ ಆಯೋಜಿಸುತ್ತಿದ್ದಾರೆ: ಮುನೀರ್ ಕಾಟಿಪಳ್ಳ ಆರೋಪ ಶಿಕ್ಷಣ,ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ‘ಜನ ಸಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ, ಘೋಷಣೆಯ ಅಡಿಯಲ್ಲಿ ಅಂಬೆಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ವರಗೆ […]

Continue Reading

ಸುಳ್ಳು ಜಾತಿ ಪ್ರಮಾಣಪತ್ರ, ಶಾಸಕ ಕೊತ್ತೂರು ಮಂಜುನಾಥ್‌ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರದಲ್ಲಿ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆಂಬ ಆರೋಪದ ಕುರಿತು ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೋಲಾರದ ಹಾಲಿ ಶಾಸಕ ಕೊತ್ತೂರು ಮಂಜುನಾಥ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಮಂಜುನಾಥ್‌ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜಯ್‌ ಕುಮಾರ್‌ ಮತ್ತು ಅಲೋಕ್‌ ಅರಾಧೆ ಅವರಿದ್ದ ವಿಭಾಗೀಯಪೀಠ ಶುಕ್ರವಾರ ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಹೈಕೋರ್ಟ್‌ ಆದೇಶದಂತೆ ಎಫ್‌ಐಆರ್‌ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು […]

Continue Reading