ಉಳ್ಳಾಲ: ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಮನೆಗೆ ಪೊಲೀಸರಿಂದ ದಾಳಿ – ಇಬ್ಬರು ಅರೆಸ್ಟ್

ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ (24)‌ ಎಂದು ತಿಳಿದುಬಂದಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ಮನೆಗೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ […]

Continue Reading

ಬಜಪೆ: ಇನ್ಸ್ಟಾಗ್ರಾಮ್ ಪರಿಚಯ; ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ವಿಡಿಯೋ ಶೇರ್ ಪ್ರಕರಣ, ಆರೋಪಿಗಳು ಜೈಲಿಗೆ.

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡು ಅತ್ಯಾಚಾರ ನಡೆಸಿ, ವಿಡಿಯೋ ಶೇಖ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಬಂಧಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಅಗಸ್ಟ್ 16 ರಂದು ಅಪ್ರಾಪ್ತ ವಿದ್ಯಾರ್ಥಿನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಬಜಪೆ ಪೊಲೀಸರು ಪ್ರಕರಣ ಸಂಖ್ಯೆ 147/2025 ರಂತೆ ಆರೋಪಿಗಳ ವಿರುದ್ದ FIR ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಗುರುಪುರ ಕೈಕಂಬದ ಕಿನ್ನಿಕಂಬಳ ಬಳಿಯಿರುವ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಗೆ […]

Continue Reading

60-70 ಶಾಸಕರಿದ್ದಾರೆ ಎಂದು ನಂಬಿ ಡಿಕೆಶಿಗೆ ಸಿಎಂ ಕೊಡಲು ಮುಂದಾಗಿತ್ತು.! ಅಸಲಿ ಸತ್ಯ ಗೊತ್ತಾದಾಗ ಯೂಟರ್ನ್ ಹೊಡೆದಿತ್ತು ಬಿಜೆಪಿ.!

ರಾಜ್ಯ ರಾಜಕಾರಣದಲ್ಲಿ ಧೂಳೆಬ್ಬಿಸಿದ ಯತ್ನಾಳ್ ಸಿಡಿಸಿದ ಬಾಂಬ್ ರಾಜ್ಯ ರಾಜಕಾರಣದಲ್ಲಿ ಆ ಒಂದು ಹೇಳಿಕೆ ಮಿಂಚಿನ ಸಂಚಾರಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿಕೆಶಿ ಬಿಜೆಪಿ ಸೇರ್ಪಡೆ ಬಗ್ಗೆ ಕೆಲವು ತಿಂಗಳ ಹಿಂದೆಯೇ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆದಿತ್ತು. ಬಿಜೆಪಿ ಸೇರ್ಪಡೆಗೆ ಡಿಕೆಶಿ ತುದಿಗಾಲಲ್ಲಿ ನಿಂತಿದ್ದರು ಎಂದು ಬಿಜೆಪಿ ಉಚ್ಛಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಡಿಕೆಶಿಯವರು ಒಂದು ಕಾಲು ಕಾಂಗ್ರೆಸ್ಸಿನಲ್ಲಿ, ಮತ್ತೊಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ. ಕೆಲವು ತಿಂಗಳುಗಳ ಹಿಂದೆ […]

Continue Reading

ನಕಲಿ ಇನ್ ವಾಯ್ಸ್ ಗಳನ್ನು ಸೃಷ್ಟಿಸಿ, 45 ಕೋಟಿ ರೂಪಾಯಿ ವಂಚನೆ; ಜಿ.ಎಸ್.ಟಿ. ಗುಪ್ತಚರ ನಿರ್ದೇಶನಾಲಯದಿಂದ ವ್ಯಕ್ತಿಯ ಬಂಧನ

145 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್ ವಾಯ್ಸ್ ಗಳನ್ನು ಸೃಷ್ಟಿಸಿ ಅಂದಾಜು 45 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಜಿ.ಎಸ್.ಟಿ. ಗುಪ್ತಚರ ನಿರ್ದೇಶನಾಲಯದ ಬೆಳಗಾವಿ ವಲಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಗಳ ಪ್ರಕಾರ, ನಕಲಿ ದಾಖಲೆಗಳನ್ನು ಬಳಸಿಕೊಂಡು ಸುಸಜ್ಜಿತ ಗುಂಪೊಂದು ನಕಲಿ ಜಿ ಎಸ್ ಟಿ ನೋಂದಣಿಗಳನ್ನು ಸೃಷ್ಟಿಸಿ ನಕಲಿ ಐಟಿಸಿಯನ್ನು ಪಡೆದುಕೊಂಡು ರವಾನಿಸುವ ಚಟುವಟಿಕೆಯಲ್ಲಿ ನಿರತವಾಗಿತ್ತು. ಶೋಧದ ಸಮಯದಲ್ಲಿ ಆರೋಪಿಯಿಂದ ಅಧಿಕಾರಿಗಳು ಮೊಬೈಲ್ ಫೋನ್, ನಕಲಿ ದಾಖಲೆಗಳು, […]

Continue Reading

ಕರ್ನಾಟಕದಲ್ಲಿ GPA ಕಡ್ಡಾಯ ನೋಂದಣಿ – ಮತ್ತು ಜೀವಿತ ಪ್ರಮಾಣಪತ್ರ ಜನತೆಗೆ ಬಂದಿರುವ ಸಂಕಷ್ಟಗಳು

✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು ಸರ್ಕಾರದ ಉದ್ದೇಶ ಪಾರದರ್ಶಕತೆ ಮತ್ತು ಮೋಸ ತಡೆಯುವುದಾದರೂ, ಈ ತಿದ್ದುಪಡಿ ಸಾಮಾನ್ಯ ಜನತೆಗೆ, ರೈತರಿಗೆ, ಖರೀದಿದಾರರಿಗೆ, ಹೂಡಿಕೆದಾರರಿಗೆ ಮತ್ತು ವಕೀಲ ಸಮುದಾಯಕ್ಕೆ ಅಸಹನೀಯ ಸಂಕಷ್ಟಗಳನ್ನು ತಂದಿದೆ. ಸರ್ಕಾರವು ತಕ್ಷಣ ಸ್ಪಷ್ಟನೆ ನೀಡದಿದ್ದರೆ, ಇದು ಆಸ್ತಿ ವ್ಯವಹಾರಗಳ ಮೇಲೆ ಭಾರಿ ಹೊಡೆತ ನೀಡುವುದಲ್ಲದೆ, ಕರ್ನಾಟಕದ ಆರ್ಥಿಕ ಚಟುವಟಿಕೆಗೂ ಹಾನಿ ತರುವ ಸಾಧ್ಯತೆ ಇದೆ. ಆದ್ದರಿಂದ, ಈ ತಿದ್ದುಪಡಿಗೆ ಸೂಕ್ತ ನಿಯಮಗಳನ್ನು ಜಾರಿ ಮಾಡಿ, ಜನರ ಹಿತಾಸಕ್ತಿಯನ್ನು ಕಾಯ್ದುಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ. ಕರ್ನಾಟಕದಲ್ಲಿ […]

Continue Reading

ಬಜ್ಪೆ: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಪಾಪಿ ತಂದೆಗೆ 5 ವರ್ಷ ಕಠಿಣ ಶಿಕ್ಷೆ…

ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2024 ರ ಡಿಸೆಂಬರ್ 18 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮೂಲತಃ ರಾಣೆಬೆನ್ನೂರು ಬೈಲೂರಿನ ಪ್ರಸಕ್ತ ಬಜ್ಜೆಯ ನಿವಾಸಿಯಾಗಿರುವ 34 ವರ್ಷ ಪ್ರಾಯದ ವ್ಯಕ್ತಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಮಗುವಿನ ತಾಯಿ ಮಗುವನ್ನು ತನ್ನ ತಂಗಿಯ ಮನೆಯಲ್ಲಿ […]

Continue Reading

ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಗ್ರೇಡ್ -1 ತಹಶೀಲ್ದಾರ್ ವೆಂಕಟೇಶಪ್ಪ ಅವರು ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿದ್ದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಜಿ ಪಂಡಿತ್ ಮತ್ತು ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. […]

Continue Reading

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕ ದುಪ್ಪಟ್ಟು, ಆಗಸ್ಟ್ 31 ರಿಂದ ಜಾರಿ; ಕಂದಾಯ ಇಲಾಖೆ ಆದೇಶ

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಆ.31ರಿಂದ ಅನ್ವಯವಾಗುವಂತೆ ನೋಂದಣಿ ಶುಲ್ಕ ಶೇ.1ರಿಂದ ಶೇ.2ಕ್ಕೆ ಹೆಚ್ಚಳ ಆಗಲಿದೆ. ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ, ಸ್ವಾಧೀನ ಭೋಗ್ಯ ಪತ್ರ, ಕ್ರಯ ಉದ್ದೇಶದ ಜಿಪಿಎ ಸೇರಿ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ. ಈವರೆಗೆ ರಾಜ್ಯದಲ್ಲಿ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿ ಯಾವುದೇ ಸ್ಥಿರಾಸ್ತಿ ಖರೀದಿ ವೇಳೆ ಶೇ.1 ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6 ರಷ್ಟು ಮುದ್ರಾಂಕ […]

Continue Reading

ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಸರಬರಾಜು; ಸಿಸಿಬಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ದೇರಳಕಟ್ಟೆಯ ಅರ್ಶದ್

ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ತರಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೂಲತಃ ಕೇರಳದ ಕೊಚ್ಚಿ ನಿವಾಸಿ, ಪ್ರಸ್ತುತ ದೇರಳಕಟ್ಟೆಯಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅರ್ಶದ್ ಖಾನ್ ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಬಳಿಯಿದ್ದ 53.29 ಗ್ರಾಂ ಎಂಡಿಎಂಎ, 2.33 ಗ್ರಾಂ ಹೈಡೋವೀಡ್ ಗಾಂಜಾ ಹಾಗೂ 0.45 ಗ್ರಾಂ ಎಂಡಿಎಂಎ ಪಿಲ್ಸ್ […]

Continue Reading

ಬೆಳ್ತಂಗಡಿ:ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ವಸತಿಗೃಹದಲ್ಲಿ ಮಾರ್ಚ್ 1, 2014 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ಅವರು ಆದೇಶ ನೀಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸದ್ರಿ‌ […]

Continue Reading