ಸಂಬಂಧಿಕ ಯುವಕನಿಂದಲೇ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಮಗು ಸಾವು

ಅಪ್ರಾಪ್ತೆಯೊಬ್ಬಳು ಮಗುವಿಗೆ ಜನ್ಮ ನೀಡಿದ ಹಾಗೂ ಮಗು ಜನನವಾದ ಒಂದು ದಿನದ ಬಳಿಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಠಾಣೆ ವ್ಯಾಪ್ತಿಯ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಅಪ್ರಾಪ್ತೆಯೊಬ್ಬಳನ್ನು ಸಂಬಂಧಿಕನೇ ಗರ್ಭವತಿ ಮಾಡಿದ್ದ ಪ್ರಕರಣ ಇದಾಗಿತ್ತು. ಅಪ್ರಾಪ್ತೆ ಬಾಲಕಿ ಕಂದ್ರಪ್ಪಾಡಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿಕ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪರಿಣಾಮ ಆಕೆ ಗರ್ಭವತಿಯಾಗಿದ್ದಳು. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಲ್ಲದೇ ಆರೋಪಿ ಯುವಕನನ್ನು ಬಂಧಿಸಲಾಗಿತ್ತು. ಗರ್ಭವತಿಯಾಗಿದ್ದ ಯುವತಿ ಸೋಮವಾರ […]

Continue Reading

ದಾಖಲೆಗಾಗಿ ಇಪ್ಪತ್ತು ಸಾವಿರ ಲಂಚ.., ಬಂಟ್ವಾಳ ತಾಲೂಕು ಮಿನಿ ವಿಧಾನಸೌಧಕ್ಕೆ ಲೋಕಾಯುಕ್ತ ದಾಳಿ

ಉಪತಹಶೀಲ್ದಾರ್, ಪ್ರಥಮ ದರ್ಜೆ ಸಹಾಯಕ, ಬ್ರೋಕರ್ ಅಂದರ್. ತಹಶೀಲ್ದಾರ್ ಗೆ ಹೆಚ್ಚಿನ ವಿಚಾರಣೆ. ಬಂಟ್ವಾಳ ತಾಲೂಕು ಕಛೇರಿಯ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತೊಮ್ಮೆ ಬಯಲಾಗಿದೆ. ಸಜಿಪ ಮುನ್ನೂರು ನಿವಾಸಿ ಪುಷ್ಪರಾಜ್ ಎಂಬವರಿಂದ ಜಮೀನಿನ ದಾಖಲೆ ಸರಿಪಡಿಸಲು ಬಿ.ಸಿ.ರೋಡ್ ಅನ್ನಪೂರ್ಣೇಶ್ವರಿ ದೇವಸ್ಥಾನ ಸಮೀಪ ಬ್ರೋಕರ್ ವಾಮದಪದವು ನಿವಾಸಿ ಗಣೇಶ್ ಎಂಬಾತನ ಮೂಲಕ ಇಪ್ಪತ್ತು ಸಾವಿರ ಲಂಚ ಪಡೆಯುತ್ತಿದ್ದ ಉಪತಹಶೀಲ್ದಾರ್, ಪ್ರಥಮ ದರ್ಜೆ ಸಹಾಯಕ ಸಂತೋಷ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿಚಾರಣೆ ಸಂದರ್ಭ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಪಾಲು […]

Continue Reading

ವಾಣಿಜ್ಯ ಪರವಾನಗಿ ರದ್ಧುಪಡಿಸುವ ಪ್ರಶ್ನೆಯೇ ಇಲ್ಲ. ವ್ಯಾಪಾರಸ್ಥರಿಗೆ ಟ್ರೇಡ್ ಲೈಸೆನ್ಸ್ ಪಡೆಯುವುದು ಕಡ್ಡಾಯ: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು

ರಾಜ್ಯದಲ್ಲಿ ವಾಣಿಜ್ಯ ಪರವಾನಗಿ ರದ್ಧುಪಡಿಸುವ ಪ್ರಶ್ನೆಯೇ ಇಲ್ಲ. ವ್ಯಾಪಾರಸ್ಥರಿಗೆ ಟ್ರೇಡ್ ಲೈಸೆನ್ಸ್ ಪಡೆಯುವುದು ಕಡ್ಡಾಯ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಗರ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಪಾರದರ್ಶಕವಾಗಿ ನಿಗದಿತ ಶುಲ್ಕ ಪಡೆದು ವ್ಯಾಪಾರ ಪರವಾನಗಿಯನ್ನು ನೀಡಲಾಗುತ್ತಿದೆ. ಇದರಿಂದ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸ್ವಲ್ಪ ಮಟ್ಟಿನ ಆದಾಯ ಬರುತ್ತಿದೆ. ಒಂದು ವೇಳೆ ರದ್ದು ಮಾಡಿದರೆ ಪ್ರಾಧಿಕಾರಗಳ ಮೇಲೆ ಆರ್ಥಿಕ ಹೊರೆ […]

Continue Reading

ಕಾನೂನು ಸೇವೆ ಒದಗಿಸಿ ಕೊಡುವುದಾಗಿ ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಬೃಹತ್‌ ಸೈಬರ್‌ ವಂಚನೆ ಜಾಲವನ್ನು ಬೇಧಿಸಿದ ಸಿಸಿಬಿ ಪೊಲೀಸರು.

ವಂಚನೆ ನಡೆಸಲು ಬಳಸುತ್ತಿದ್ದ ಹತ್ತು ಲಕ್ಷ ಮೌಲ್ಯದ ಉ‍ಪಕರಣ ಜಪ್ತಿ ಸೈಬರ್ ವಂಚನೆಗೆ ಒಳಗಾದವರಿಗೆ ಕಾನೂನು ಸೇವೆ ಒದಗಿಸಿ ಕೊಡುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಬೃಹತ್‌ ಸೈಬರ್‌ ವಂಚನೆ ಜಾಲ ಪ್ರಕರಣದ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ವಂಚನೆ ನಡೆಸಲು ಬಳಸುತ್ತಿದ್ದ ರೂ. ಹತ್ತು ಲಕ್ಷ ಮೌಲ್ಯದ ಉ‍ಪಕರಣಗಳನ್ನು ಜಪ್ತಿ ಮಾಡಿದ್ದಾರೆ. ಆಗಸ್ಟ್‌ 2ರಂದು ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಪ್ರಕರಣ ಆಧರಿಸಿ, ವೈಟ್‌ಫೀಲ್ಡ್‌ನ ಡೇಟಾ ಸೆಂಟರ್‌ ಮೇಲೆ ಸಿಸಿಬಿ ಪೊಲೀಸರು ದಾಳಿ […]

Continue Reading

ಯುಎಇ ಯಕ್ಷಗಾನ ಕೇಂದ್ರದಿoದ ಯಕ್ಷಗಾನಾರ್ಚಣೆ, ಯಕ್ಷದರ್ಪಣ ಬಿಡುಗಡೆ ಸಾಧಕರಿಗೆ ಯಕ್ಷಶ್ರೀರಕ್ಷಾ ಗೌರವಾರ್ಪಣೆ

ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ ಯುಎಇ ಕನ್ನಡಿಗರು : ಡಾ.ತಲ್ಲೂರು ಉಡುಪಿ : ಕರಾವಳಿಯ ಶ್ರೀಮಂತ ಯಕ್ಷಗಾನ ಕಲೆಯನ್ನು ಯುಎಇಯಲ್ಲಿ ನೆಲೆಸಿರುವ ಕನ್ನಡಿಗರು, ತುಳುವರು ಅಲ್ಲಿಯೇ ಯಕ್ಷಗಾನ ಅಭ್ಯಾಸ ಕೇಂದ್ರವನ್ನು ಪ್ರಾರಂಭಿಸುವ ಮೂಲಕ ಈ ಕಲೆಯನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಕರ್ನಾಟಕ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಶ್ರೀಕ್ಷೇತ್ರ ಕಟೀಲಿನ ರಥಬೀದಿಯ ಸರಸ್ವತಿ ಸದನದಲ್ಲಿ ಯುಎಇ -ಮಧ್ಯಪ್ರಾಚ್ಯದ ಏಕೈಕ ಮತ್ತು ಪ್ರಪ್ರಥಮ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ […]

Continue Reading

ಮೂರು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಪುರುಷರಿಂದ ಹನ್ನೆರಡು ವರ್ಷದ ಬಾಲಕಿಯ ನಿರಂತರ ಅತ್ಯಾಚಾರ

12 ವರ್ಷದ ಬಾಲಕಿ ಮೇಲೆ ಸರಿ-ಸುಮಾರು 200 ಪುರುಷರು ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಇದೀಗ ‌ಈ ಕೃತ್ಯ ಎಸಗಿದ 10 ಮಂದಿಯನ್ನು ಬಂಧಿಸಲಾಗಿದೆ. ಮುಂಬೈ ಸಮೀಪದ ವಸೈನಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ ಹನ್ನೆರಡು ವರ್ಷದ ಬಾಂಗ್ಲಾದೇಶಿ ಬಾಲಕಿಯ ಮೇಲೆ ಮೂರು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಪುರುಷರು ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಎಂದು ಬಾಲಕಿ ಹೇಳಿ ಕೊಂಡಿದ್ದಾಳೆ. ಈ ಘಟನೆ ಗುಜರಾತ್‌ನ ನಾಡಿಯಾಡ್‌ನಲ್ಲಿ ನಡೆದಿದೆ. ನಂತರ ಅವಳನ್ನು ವಸೈ ಸಮೀಪದ ನೈಗಾಂವ್‌ ನಲ್ಲಿರುವ […]

Continue Reading

ಅಗಸ್ಟ್ 12 ರಂದು ಜಿಲ್ಲಾ ಉಸ್ತುವಾರಿ ಸಚಿವರು, ಗಣಿ ಸಚಿವರ ನೇತೃತ್ವದಲ್ಲಿ ಜನಪ್ರತಿನಿಧಿಗಳೊಂದಿಗೆ ಮರಳು,ಕಲ್ಲು ಗಣಿಗಾರಿಕೆ ಸಂಬಂಧ ಬೆಂಗಳೂರಿನಲ್ಲಿ ಮಹತ್ವದ ಸಭೆ

ಇನ್ನಾದರೂ ಸಮಸ್ಯೆ ಇತ್ಯರ್ಥವಾಗಬಹುದಾ.? ದ.ಕ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರು, ಕರಾವಳಿ ಭಾಗದವರೇ ಆದ ವಿಧಾನಸಭಾ ಸಭಾಧ್ಯಕ್ಷರ ಉಪಸ್ಥಿತಿಯಲ್ಲಿ ಅಗಸ್ಟ್ 12 (ಮಂಗಳವಾರ) ದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆದೋರಿರುವ ಮರಳಿನ ಸಮಸ್ಯೆ ಹಾಗೂ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಮಹತ್ವದ ಸಭೆ ಬೆಂಗಳೂರು ವಿಧಾನ ಸೌಧದಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸಂಸದರು, ಶಾಸಕರು […]

Continue Reading

ಸುನೀಲ್ ಕುಮಾರ್ ಫೀಲ್ಡಿಗೆ ಎಂಟ್ರಿಯಾಗಿದ್ದು ಹೇಗೆ.? ಬಿಜೆಪಿ ವರಿಷ್ಟರಿಗೆ ಜೆಡಿಎಸ್ ಏಕೆ ಬೇಕು?

✍️ .ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಚ ವಿಜಯೇಂದ್ರ ಅವರ ಕಿವಿಗೆ ಒಂದು ಸಂದೇಶ ತಲುಪಿದೆ.ಅವರಿಗೆ ಈ ಸಂದೇಶ ತಲುಪಿಸಿದ್ದು ಸ್ವತ: ಅವರ ಗೂಢಚಾರರ ಪಡೆ.ವಿಧಾನಸಬೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಡಿದರೆನ್ನಲಾದ ಮಾತನ್ನು ಈ ಗೂಢಚಾರರ ಪಡೆ ತಮ್ಮ ಕಿವಿಗೆ ತಲುಪಿಸಿದ್ದೇ ತಡ,ವಿಜಯೇಂದ್ರ ಕೆಂಡಾಮಂಡಲಗೊಂಡಿದ್ದಾರೆ.ಅಷ್ಟೇ ಅಲ್ಲ,ತಮಗೆ ತಲುಪಿದ ಸಂದೇಶದ ವಿವರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಲುಪಿಸಿ:’ಹೀಗೆಲ್ಲ ಆದರೆ ನಾನು ಕೆಲಸ ಮಾಡುವುದು ಹೇಗೆ ಸಾರ್?’ಅಂತ ಕೇಳಿದ್ದಾರೆ.ಅಂದ ಹಾಗೆ ವಿಜಯೇಂದ್ರ ಅವರ ಕೋಪಕ್ಕೆ […]

Continue Reading

ಅಸ್ಮಿತ ಖೇಲೋ ಇಂಡಿಯಾ ಕ್ರೀಡಾಕೂಟದ ಟ್ವೆಕಾಂಡೋ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಚಿನ್ನದ ಪದಕ

ಬೈಕಂಪಾಡಿ ಬೆಟ್ರಂಡ್ ರೆಸೆಲ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸ್ವಪ್ನಾ ಐತಿಹಾಸಿಕ ದಾಖಲೆ ಬಂಟ್ವಾಳ: ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಸ್ಮಿತ ಖೇಲೋ ಇಂಡಿಯಾ ಕ್ರೀಡಾಕೂಟದ ಟ್ವೆಕಾಂಡೋ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಚಿನ್ನದ ಪದಕದ ಗೌರವ ದೊರೆತಿದೆ. ಬೈಕಂಪಾಡಿ ಬೆಟ್ರಂಡ್ ರೆಸೆಲ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸ್ವಪ್ನಾ ಅವರು ಈ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಸ್ವಪ್ನಾ ಅವರು ಕೆಡೆಟ್ ಮಹಿಳಾ ಅಂಡರ್-33 ಕೆಜಿ ಟೆಕ್ವಾಂಡೋ […]

Continue Reading

ಸಿದ್ದರಾಮಯ್ಯರವರ ಪರಮಾಪ್ತ ಎಂದೇ ಗುರುತಿಸಿಕೊಂಡಿರುವ G.V ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿತ್ಯ ನಿರಂತರವಾಗಿ ಪ್ರತಿನಿತ್ಯ ಒಂದಿಲ್ಲೊಂದು ಗೊಂದಲ, ಕುತೂಹಲಕಾರಿ ಬೆಳವಣಿಗೆಗಳು, ಬಣಗಳ ನಡುವಿನ ತಿಕ್ಕಾಟ ನಡೆಯುತ್ತಲೇ ಇದೆ. ಈ ಮಧ್ಯೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಇಂದು ಕಾಂಗ್ರೆಸ್ ನಾಯಕನೊಬ್ಬನ ಉಚ್ಛಾಟನೆಯಾಗಿದೆ. ಅದೂ ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ಎಂದೇ ಗುರುತಿಸಿಕೊಂಡಿರುವ G.V ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇದು ಪಕ್ಷದೊಳಗಿನ ಶೀತಲ ಸಮಾರಾ ಇನ್ನಷ್ಟು ಹೆಚ್ಚಾಗುವ ಸೂಚನೆ ನೀಡಿದಂತಿದೆ. ಸಿದ್ದರಾಮಯ್ಯರ ಪರಮಾಪ್ತ […]

Continue Reading